ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಸ್ತ್ರಚಿಕಿತ್ಸೆ ವೇಳೆ ಯುವತಿ ಸಾವು: ಸಂಬಂಧಿಗಳ ಪ್ರತಿಭಟನೆ

Last Updated 31 ಡಿಸೆಂಬರ್ 2022, 7:44 IST
ಅಕ್ಷರ ಗಾತ್ರ

ರಾಯಚೂರು: ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಮೂಗಿನ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದ ಯುವತಿಯು ಮೃತಪಟ್ಟಿದ್ದು, ಈ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿರುವ ಸಂಬಂಧಿಗಳು ಶನಿವಾರ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಯಚೂರು ತಾಲ್ಲೂಕು ಅಪ್ಪನದೊಡ್ಡಿ ಗ್ರಾಮದ ಯುವತಿ ರಾಜೇಶ್ವರಿ (18) ಮೃತ ಯುವತಿ.‌ ಮೂಗಿನಲ್ಲಿ ಸೋಂಕು ಸಮಸ್ಯೆಯಿಂದ ಬಳಲುತ್ತಿದ್ದ‌ರಿಂದ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು.

ಸಾವಿನ ಸಂಬಂಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಮೃತ ಯುವತಿಯ ತಾಯಿ‌ಯು ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಶವ ಪಡೆದುಕೊಳ್ಳಲು ನಿರಾಕರಿಸಿರುವ ಸಂಬಂಧಿಗಳು ಆಸ್ಪತ್ರೆ ಎದುರು ಪ್ರತಿಭಟನೆ ಮುಂದುವರಿಸಿದ್ದಾರೆ. ನಿರ್ಲಕ್ಷ್ಯ ವಹಿಸಿರುವ ವೈದ್ಯರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.ಪೊಲೀಸರು ಮನವೊಲಿಸುವ ಪ್ರಯತ್ನ ಮಾಡಿದರೂ ಸಾಧ್ಯವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT