ಸಿಂಧನೂರು (ರಾಯಚೂರು ಜಿಲ್ಲೆ): ತಾಲ್ಲೂಕು ಆಡಳಿತದಿಂದ ಏರ್ಪಡಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕೋಲಾಟ ನೃತ್ಯ ಪ್ರದರ್ಶಿಸುತ್ತಿದ್ದ ಆರೋಗ್ಯ ಇಲಾಖೆಯ ಹೊರಗುತ್ತಿಗೆ ಸಿಬ್ಬಂದಿ ಮಹಾಂತೇಶ ಪೂಜಾರ (40) ಸ್ಥಳದಲ್ಲೇ ತೀವ್ರ ಹೃದಯಾಘಾತದಿಂದ ಕುಸಿದು ಗುರುವಾರ ಮೃತಪಟ್ಟಿದ್ದಾರೆ.
ಮೈದಾನದ ಪಕ್ಕದಲ್ಲಿದ್ದ ಖಾಸಗಿ ಆಸ್ಪತ್ರೆಗೆ ಎತ್ತಿಕೊಂಡು ಹೋದರೂ ಪ್ರಯೋಜನವಾಗಿಲ್ಲ. ಸಿಂಧನೂರು ತಾಲ್ಲೂಕು ದಿದ್ದಿಗಿ ಗ್ರಾಮದ ಮೃತ ಮಹಾಂತೇಶ ಅವರು ಕಳೆದ 10 ವರ್ಷಗಳಿಂದ ತಾಲ್ಲೂಕು ಆಸ್ಪತ್ರೆಯ ಎಎಆರ್‌ಟಿ ವಿಭಾಗದಲ್ಲಿ ಸಮಾಲೋಕರಾಗಿದ್ದರು. ಮೃತರಿಗೆ ಪತ್ನಿ, ಮೂವರು ಪುತ್ರಿಯರಿದ್ದಾರೆ.
ಸಹಪಾಠಿಗಳೊಂದಿಗೆ ಸಂಗೀತಕ್ಕೆ ತಕ್ಕಂತೆ ಕೋಲಾಟದಲ್ಲಿ ಮಗ್ನರಾಗಿದ್ದ ಮಹಾಂತೇಶ ಅವರು, ಇದ್ದಕ್ಕಿದ್ದಂತೆ ಕುಸಿದು ಬಿದ್ದಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.