ಸೋಮವಾರ, ಜನವರಿ 27, 2020
22 °C

ಯುವ ಸಪ್ತಾಹ ಜಾಥಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ರಾಷ್ಟ್ರೀಯ ಯುವ ಸಪ್ತಾಹ ಜಾಥಾಕ್ಕೆ ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ಸುರೇಂದ್ರ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಜಿಲ್ಲಾ ಕ್ರೀಡಾಂಗಣದಿಂದ ಪ್ರಾರಂಭವಾದ ಜಾಥಾವು ನಗರದ ವಿವಿಧ ವೃತ್ತಗಳ ಮೂಲಕ ತೆರಳಿ ಮಾವಿನಕೆರೆ ದಡದಲ್ಲಿರುವ ಸ್ವಾಮಿ ವಿವೇಕಾನಂದರ ಪುತ್ತಳಿಗೆ ತೆರಳಲಾಯಿತು. ಈ ಜಾಥಾದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ರಾಜು, ಶ್ರೀನಿವಾಸ ರಾಯಚೂರುಕರ್, ವಕೀಲ ಅತಾವುಲ್ಲ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗ್ರೀನ್ ರಾಯಚೂರು, ರೆಡ್ ಕ್ರಾಸ್ ಸಂಸ್ಥೆ, ಭಾರತ ಸೇವಾದಳ, ಯುವ ಸ್ಪಂದನ, ಸ್ನಾತಕೋತ್ತರ ಕಾಲೇಜು ಹಾಗೂ ವಿವೇಕಾನಂದ ಬಿಪಿಇಡಿ ಕಾಲೇಜು ಸಹಯೋಗದಲ್ಲಿ ಈ ಜಾಥಾ ಆಯೋಜಿಸಲಾಗಿತ್ತು.

ಪ್ರತಿಕ್ರಿಯಿಸಿ (+)