ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ಖಾತರಿ: ಜಾಗೃತಿ ರಥಕ್ಕೆ ಹಸಿರು ನಿಶಾನೆ

Last Updated 19 ಫೆಬ್ರುವರಿ 2020, 20:15 IST
ಅಕ್ಷರ ಗಾತ್ರ

ರಾಯಚೂರು: ತಾಲ್ಲೂಕಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕುರಿತು ಕೂಲಿಕಾರರಿಗೆ ಜಾಗೃತಿ ಮೂಡಿಸುವ ರಥಕ್ಕೆ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಬುಧವಾರ ಹಸಿರು ನಿಶಾನೆ ತೋರಿಸಿದರು.

ನಂತರ ಮಾತನಾಡಿದ ಅವರು, ಜಿಲ್ಲೆಯ ಜನ ಗುಳೆ ಹೋಗುವುದನ್ನು ತಪ್ಪಿಸಲು ಉದ್ಯೋಗ ಖಾತರಿ ಯೋಜನೆ ಅತ್ಯಂತ ಉಪಯುಕ್ತ, ಯೋಜನೆಯಡಿ ಪ್ರತಿ ಕುಟುಂಬಕ್ಕೆ 100 ದಿನ ಉದ್ಯೋಗ ನೀಡಲಾಗುವುದು. ಪ್ರಸಕ್ತ ವರ್ಷ 50 ದಿನಗಳನ್ನು ಹೆಚ್ಚುವರಿಯಾಗಿ ಉದ್ಯೋಗ ಒದಗಿಸಲು ಸರ್ಕಾರ ಘೋಷಿಸಿದೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪುರುಷ ಮತ್ತು ಮಹಿಳೆಯರಿಗೆ ಸರಿ ಸಮಾನ ಕೂಲಿ ₹249 ಗಳನ್ನು ನೀಡಲಾಗುತ್ತಿದೆ. ಈ ಯೋಜನೆಗೆ ಹೆಚ್ಚಿನ ಪ್ರಚಾರ ಕೊಡುವುದರೊಂದಿಗೆ ಜನರಿಗೆ ಕೆಲಸ ನೀಡುವುದರೊಂದಿಗೆ ಆಸ್ತಿಗಳನ್ನು ಸೃಜನೆ ಮಾಡಿಕೊಂಡು ಈ ಯೋಜನೆಯ ಲಾಭ ಪಡೆಯಬೇಕು ಎಂದು ತಿಳಿಸಿದರು.

ಉದ್ಯೋಗ ವಾಹಿನಿ ಪ್ರಚಾರ ರಥವು ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ ಸಂಚರಿಸಿ ಯೋಜನೆಯ ಬಗ್ಗೆ ಮಾಹಿತಿ ನೀಡಿ, ಕೂಲಿ ಕಾರ್ಮಿಕರು ಬೇರೆ ಕಡೆ ವಲಸೆ ಹೋಗದಂತೆ ಜಾಗೃತಿ ಮೂಡಿಸಲಿದೆ.

ಜಿಲ್ಲಾ ಪಂಚಾಯಿತಿ ಸದಸ್ಯರು, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮರೆಡ್ಡಿ ಪಾಟೀಲ ಮತ್ತು ಮಹಾತ್ಮ ಗಾಂಧಿ ನರೇಗಾ ಯೋಜನೆಯ ಸಿಬ್ಬಂದಿ ಡಿಐಇಸಿ ವಿಶ್ವನಾಥ ಟಿಐಇಸಿ ಧನರಾಜ ಹಾಗೂ ಎನ್‌ಅರ್‌ಎಲ್‌ಎಮ್ ಯೋಜನೆಯ ವಿಜಯಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT