ಕವಿತಾಳ: ಸಮೀಪದ ವಟಗಲ್ ಗ್ರಾಮದ ಇಂದಿರಾ ಗಾಂಧಿ ವಸತಿ ಶಾಲೆ, ಪಾಮನಕಲ್ಲೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಜೆಜೆಎಂ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ ಕಾಂದೂ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.

‘ವಸತಿ ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಹೊಸದಾಗಿ ಕೊಳವೆಬಾವಿ ಕೊರೆಯಿಸುವಂತೆ ಮತ್ತು ಮಕ್ಕಳಿಗೆ ಪಠ್ಯ ಪುಸ್ತಕಗಳನ್ನು ಶೀಘ್ರ ವಿತರಣೆ ಮಾಡಿ’ ಎಂದು ಪ್ರಾಚಾರ್ಯರಿಗೆ ತಾಕೀತು ಮಾಡಿದರು.

‘ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲೆ ನಿರ್ವಹಣೆ ಮಾಡದ ಪ್ರಯೋಗಾಲಯ ತಂತ್ರಜ್ಞನ ವಿರುದ್ದ ಕ್ರಮ ಕೈಗೊಳ್ಳಿ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶರಣಬಸವರಾಜ ಅವರಿಗೆ ಸೂಚಿಸಿದರು.

ಜೆಜೆಎಂ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು ಪೈಪ್ಲೈನ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲ್ಲೂಕು ಪಂಚಾಯಿತಿ ಇಒ ಅಮರೇಶ ಯಾದವ, ಸಹಾಯಕ ನಿರ್ದೇಶಕ ಶಿವಾನಂದ, ಸೋಮನಗೌಡ, ಡಿ.ನಾಗೇಶ, ಸತೀಶ, ಡಾ.ತಬಸುಮ್, ಪ್ರಾಚಾರ್ಯ ಮಹಾಂತೇಶ ಮತ್ತು ಅಭಿವೃದ್ದಿ ಅಧಿಕಾರಿಗಳು ಉಪಸ್ಥಿತರಿದ್ದರು.

ಪಾಮನಕಲ್ಲೂರು ಜನತಾ ಕಾಲೊನಿಯಲ್ಲಿ ಜೆಜೆಎಂ ಕಾಮಗಾರಿ ಹಿನ್ನೆಲೆಯಲ್ಲಿ ರಸ್ತೆ ಚರಂಡಿ ಹದಗೆಟ್ಟ ಬಗ್ಗೆ ದೂರು ಬಂದಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಈಶ್ವರ ಕುಮಾರ ಕಾಂದೂ ರಾಯಚೂರು ಜಿ.ಪಂ ಸಿಇಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.