ಸಿರವಾರ (ಕವಿತಾಳ): ಧರ್ಮ ರಕ್ಷಣೆ ಜೊತೆಗೆ ಧಾರ್ಮಿಕ ಆಚರಣೆಗೆ ಆದ್ಯತೆ ನೀಡಬೇಕು ಎಂದು ಬಾಳೆಹೊನ್ನೂರು ಮಠದ ಶ್ರೀ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕಾವೀರ ಸೋಮೇಶ್ವರ ಶಿವಾಚಾರ್ಯರು ಹೇಳಿದರು.

ಸಮೀಪದ ನೀಲಗಲ್ ಗ್ರಾಮದ ಬೃಹನ್ಮಠದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಶ್ರೀಗುರು ಪಟ್ಟಾಭಿಷೇಕ, ಡಾ.ಪಂಚಾಕ್ಷರಿ ಶಿವಾಚಾರ್ಯ ಸ್ವಾಮೀಜಿ ಅವರ ಷಷ್ಠ್ಯಬ್ದಿ ಮತ್ತು ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ಪ್ರತಿಯೊಂದು ಆಚರಣೆ ಧಾರ್ಮಿಕವಾಗಿ ಮಹತ್ವ ಪಡೆದಿದ್ದು, ಆಧುನಿಕ ಯುಗದಲ್ಲಿ ಎಲ್ಲಾ ಆಚರಣೆಗಳಿಗೆ ತಿಲಾಂಜಲಿ ನೀಡಿ ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗುತ್ತಿರುವುದು ವಿಷಾದನೀಯ ಎಂದು ಹೇಳಿದರು.

ಶ್ರೀಗಳನ್ನು ಅಡ್ಡಪಲ್ಲಕ್ಕಿ ಉತ್ಸವದ ಮೂಲಕ ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಜಯಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು.

ನೀಲಗಲ್ ಬೃಹನ್ಮಠದ ಸಿದ್ದರಾಮ ದೇವರಿಗೆ ರೇಣುಕಾ ಶಾಂತಮಲ್ಲ ಶಿವಾಚಾರ್ಯ ಎಂಬ ನೂತನ ಅಭಿದಾನದೊಂದಿಗೆ ಜಗದ್ಗುರು ಪಂಚಮುದ್ರೆಗಳನ್ನು ನೀಡುವ ಮೂಲಕ ರಾಯಚೂರು ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ ನೆರವೇರಿಸಿದರು. ನೂತನವಾಗಿ ನಿರ್ಮಾಣವಾದ ಕಲ್ಯಾಣ ಮಂಟಪ ಮತ್ತು ಮಠದ ಉದ್ಘಾಟನೆ ನೆರವೇರಿಸಲಾಯಿತು.

ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 21ಜೋಡಿ ನೂತನ ವಧುವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬಾಳೆಹೊನ್ನೂರು ಶಾಖಾ ಮಠದ ಯಡಿಯೂರು ರೇಣುಕಾ ಶಿವಾಚಾರ್ಯರು, ನವಲಕಲ್ ಬೃಹನ್ಮಠದ ಅಭಿನವ ಸೋಮನಾಥ ಶಿವಾಚಾರ್ಯರು, ಗಬ್ಬೂರು ಬೂದಿ ಬಸವೇಶ್ವರ ಶಿವಾಚಾರ್ಯರು ಸೇರಿದಂತೆ ವಿವಿಧ ಮಠಾಧೀಶರು ಉಪಸ್ಥಿತರಿದ್ದರು.
ವೀರಭದ್ರಯ್ಯ ಸ್ವಾಮಿ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.