ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಕಿ: ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಪ್ರತಿಭಟನೆ

Last Updated 21 ಮೇ 2022, 4:46 IST
ಅಕ್ಷರ ಗಾತ್ರ

ಮಸ್ಕಿ: ಪರಿಶಿಷ್ಟ ಜಾತಿ‌ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬಸವೇಶ್ವರ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ವಾಲ್ಮೀಕಿ ವೃತ್ತ, ಕನಕವೃತ್ತದ ಮೂಲಕ ಸಾಗಿ ಹಳೆಯ ಬಸ್ ನಿಲ್ದಾಣದಲ್ಲಿನ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆ ಸ್ಥಳಕ್ಕೆ ಆಗಮಿಸಿತು.

ಹಳೆ ಬಸ್ ನಿಲ್ದಾಣದ ಹೆದ್ದಾರಿ ಮೇಲೆ ಪ್ರತಿಭಟನಕಾರರು ಕೆಲ ಕಾಲ ಧರಣಿ ಕುಳಿತು ಘೋಷಣೆ ಕೂಗಿದರು. ಇದರಿಂದ ವಾಹನ ದಟ್ಟಣಿ ಹೆಚ್ಚಾಯಿತು. ಪೊಲೀಸರು ವಾಹನ ಕಳಿಸಲು ಪರದಾಡಿದರು.

ಪ್ರತಿಭಟನಕಾರರನ್ನು ಉದ್ದೇಶಿಸಿ ಮುಖಂಡರಾದ ಪ್ರಸನ್ನ ಪಾಟೀಲ, ಆರ್. ಸಿದ್ದನಗೌಡ, ಹನುಮಂತಪ್ಪ ವೆಂಕಟಾಪುರ ಮಾತನಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಹಶೀಲ್ದಾರ್ ಕವಿತಾ ಆರ್. ಅವರಿಗೆ ಮನವಿ ಸಲ್ಲಿಸಲಾಯಿತು.

ಮಹಾದೇವಪ್ಪಗೌಡ ಪೊಲೀಸ್ ಪಾಟೀಲ, ಆತ್ಮಾನಂದ ಸ್ವಾಮಿ, ವಿನಾಯಕ ಪಾಟೀಲ, ಮಲ್ಲಯ್ಯ ಬಳ್ಳಾ, ರಾಘವೇಂದ್ರ ನಾಯಕ, ವೆಂಕಟೇಶ ನಾಯಕ, ಮೌನೇಶ ನಾಯಕ, ವೀರನಗೌಡ, ಶೇಖರಗೌಡ ಪಾಟೀಲ, ಸುರೇಶ, ಅಂತರಗಂಗಿ, ಚಂದ್ರಶೇಖರ ಉದ್ಬಾಳ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT