ಮಾನ್ವಿ: ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಕರ್ತವ್ಯಕ್ಕೆ ಹಾಜರಾಗದೆ ಇರುವುದನ್ನು ಖಂಡಿಸಿ ದಲಿತ ಯುವ ಸೇನೆ, ರಾಜ್ಯಮಿತ್ರ ಯುವ ಸೇನೆ ಹಾಗೂ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆಯ ಕಾರ್ಯಕರ್ತರು ಸೋಮವಾರ ಆಸ್ಪತ್ರೆಗೆ ಬೀಗಮುದ್ರೆ ಹಾಕಿ ದಿಢೀರ್ ಪ್ರತಿಭಟನೆ ನಡೆಸಿದರು.

ಬಡ ರೋಗಿಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದರೆ ವೈದ್ಯರು ಕರ್ತವ್ಯಕ್ಕೆ ಹಾಜರಾಗದ ಕಾರಣ ತೀವ್ರ ತೊಂದರೆ ಅನುಭವಿಸುವಂತಾಗಿದೆ. ಅಸ್ಪತ್ರೆಯ ಸಿಬ್ಬಂದಿ ವೈದ್ಯರು ಬರುವ ಕುರಿತು ಸುಳ್ಳು ಹೇಳುತ್ತಾ ಕಾಲಹರಣ ಮಾಡುತ್ತಾರೆ. ಇದರಿಂದ ಆಸ್ಪತ್ರೆಗೆ ತಪಾಸಣೆ ಹಾಗೂ ಚಿಕಿತ್ಸೆಗಾಗಿ ಬರುವ ಬಡಜನರು ಆತಂಕದ ಪರಿಸ್ಥಿತಿ ಎದುರಿಸುವಂತಾಗಿದೆ ಎಂದು ಪ್ರತಿಭಟನಾಕಾರರು ದೂರಿದರು. ಸುಮಾರು 4-5 ವೈದ್ಯರು ದೀರ್ಘಾವಧಿ ರಜೆ ಮೇಲೆ ತೆರಳಿರುವುದರಿಂದ ಬಡ ರೋಗಿಗಳ ಅನುಕೂಲಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ದೀಪಕ್ ಭೂಸರೆಡ್ಡಿ ತಾಲ್ಲೂಕು ಆರೋಗ್ಯಾಧಿಕಾರಿಯನ್ನು ಸಂಪರ್ಕಿಸಿ ಬೇರೆ ವೈದ್ಯರ ವ್ಯವಸ್ಥೆ ಮಾಡಿದ ನಂತರ ಪ್ರತಿಭಟನೆಯನ್ನು ನಿಲ್ಲಿಸಲಾಯಿತು. ದಲಿತ ಯುವ ಸೇನೆಯ ಜಿಲ್ಲಾಧ್ಯಕ್ಷ ಪಿ.ರವಿಕುಮಾರ, ರಾಜ್ಯಮಿತ್ರ ಯುವ ಸೇನೆಯ ಅಧ್ಯಕ್ಷ ಸುಪ್ರಿಯ ಕುಮಾರ, ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆಯ ಅಧ್ಯಕ್ಷ ಬಿ.ಆರ್.ಸುಧಾನಂದ, ಪದಾಧಿಕಾರಿಗಳಾದ ಉರುಕುಂದ.ಜೆ, ಶಿವರಾಜ.ಡಿ, ಚಿದಾನಂದ, ಸುದರ್ಶನ, ಮಲ್ಲೇಶ ಮೇಸನ್, ಪರಶುರಾಮ, ಭಾನುಪ್ರಕಾಶ, ವೆಂಕಟೇಶ, ಆಂಜನೇಯ, ಮೌನೇಶ ಬಡಿಗೇರ, ಪ್ರಸಾದ, ಬಾಲರಾಜ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.