ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

15 ಜಿಲ್ಲೆಗಳಲ್ಲಿ ಸೆ.7ರಿಂದ 11ರವರೆಗೆ ಭಾರಿ ಮಳೆ ಸಾಧ್ಯತೆ

Last Updated 6 ಸೆಪ್ಟೆಂಬರ್ 2020, 18:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸೆ.7ರಿಂದ 11ರವರೆಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ, ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ,ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಕೆಲವೆಡೆ ಚದುರಿದಂತೆ ಮಳೆಯಾಗಬಹುದು ಎಂದು ಇಲಾಖೆ ತಿಳಿಸಿದೆ.

ಮಳೆ-ಎಲ್ಲಿ, ಎಷ್ಟು?: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ 8 ಸೆಂ.ಮೀ ಮಳೆಯಾಗಿದೆ. ಬ್ರಹ್ಮಾವರ, ಆಗುಂಬೆ 4, ಕಾರ್ಕಳ, ಬೆಳ್ತಂಗಡಿ 3, ಪುತ್ತೂರು, ಸುಳ್ಯ, ಮೂಡುಬಿದರೆ, ಸಕಲೇಶಪುರ, ಭಾಗಮಂಡಲ ಹಾಗೂ ಚಿಕ್ಕಮಗಳೂರಿನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT