ಸೋಮವಾರ, ಅಕ್ಟೋಬರ್ 21, 2019
25 °C

ಶಿವಮೊಗ್ಗ: ಭಾರಿ ಮಳೆ, ಮನೆಗಳಿಗೆ ನುಗ್ಗಿದ ನೀರು

Published:
Updated:
Prajavani

ಶಿವಮೊಗ್ಗ: ನಗರದಲ್ಲಿ ಶುಕ್ರವಾರ ರಾತ್ರಿ ಭಾರಿ ಮಳೆಯಾಗಿದ್ದು, ಹಲವೆಡೆ ಮಳೆ ನೀರು ಮನೆಗಳಿಗೆ ನುಗ್ಗಿದೆ.

ಮಳೆ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಇಲ್ಲದೆ ಬಾಪೂಜಿ ನಗರ, ಟ್ಯಾಂಕ್ ಮೋಹಲ್ಲಗಳಲ್ಲಿನ ಮನೆಗಳಿಗೆ ನೀರು ನುಗ್ಗಿದೆ.

ಮನೆಗಳಿಗೆ ನೀರು ನುಗ್ಗಿದ್ದರಿಂದ ಜನ ಪರದಾಡುವಂತಾಗಿದೆ. ಮನೆಗೆ ನುಗ್ಗಿದ್ದ ನೀರನ್ನು ಹೊರ ಹಾಕಿ, ಸ್ವಚ್ಛಗೊಳಿಸುತ್ತಿದ್ದಾರೆ.

ಜಿಲ್ಲಾ ಗಂಗಾಮತ ಸಂಘದ ವಿದ್ಯಾರ್ಥಿನಿಲಯದ ಆವರಣದಲ್ಲಿ ನೀರು ನಿಂತಿದೆ. ತರಕಾರಿ ಮಾರಾಟ ಮಳಿಗೆಗಳಿಗೂ ನೀರು ನುಗ್ಗಿದೆ. ಚರಂಡಿಯ ತಡೆಗೋಡೆ ಇಲ್ಲದೆ ಸಮಸ್ಯೆ ಹೆಚ್ಚಾಗಿದೆ.


ತರಕಾರಿ ಸಂಗ್ರಹಿಸಿದ್ದ ಮಳೀಗೆಗೆ ನೀರು ನುಗ್ಗಿರುವುದು


ತಡೆಗೋಡೆ ಇಲ್ಲದ ಚರಂಡಿ 

 


ವಿದ್ಯಾರ್ಥಿನಿಲಯದ ಆವರಣದಲ್ಲಿ ನೀರು ನಿಂತಿದೆ.

 

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)