ಆಗುಂಬೆ ಭಾಗದಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆ

7

ಆಗುಂಬೆ ಭಾಗದಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆ

Published:
Updated:

ತೀರ್ಥಹಳ್ಳಿ: ಕಳೆದ ಎರಡು ಮೂರು ದಿನಗಳಿಂದ ತಾಲೂಕಿನಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದ ತುಂಗಾ, ಮಾಲತಿ, ಕುಶಾವತಿಹೊಳೆ, ಕುಂಟೆಹಳ್ಳ ಸೇರಿದಂತೆ ಹಳ್ಳ–ಕೊಳ್ಳಗಳಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಹೆಚ್ಚುತ್ತಿದೆ.

ಶುಕ್ರವಾರ ರಾತ್ರಿಯಿಂದ ಸುರಿಯುತ್ತಿರುವ ಆಶ್ಲೇಷ ಮಳೆಯಿಂದಾಗಿ ತುಂಗಾ ನದಿಯಲ್ಲಿ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಏರಿದೆ. ಆಗುಂಬೆ ಘಟ್ಟ ಪ್ರದೇಶದ ತಪ್ಪಲಿನಲ್ಲಿ ಎಡಬಿಡದೆ ಬೀಳುತ್ತಿರುವ ಮಳೆಯಿಂದಾಗಿ ಮಾಲತಿ ನದಿ ತುಂಬಿ ಹರಿಯುತ್ತಿದೆ.

ಆಗುಂಬೆ, ನಾಲೂರು, ಮೇಗರವಳ್ಳಿ, ಹೊನ್ನೇತಾಳು, ಕೆಂದಾಳಬೈಲು, ತೀರ್ಥಹಳ್ಳಿ ಸುತ್ತಮುತ್ತಲ ಪ್ರದೇಶದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಗ್ರಾಮೀಣ ಭಾಗದ ರಸ್ತೆಗಳು ಹಾಳಾಗಿವೆ. ವಾಹನ ಸವಾರರು ಹಳ್ಳಿ–ರಸ್ತೆಗಳಲ್ಲಿ ಸಂಚರಿಸಲು ಪರದಾಡುವಂತಾಗಿದೆ. ಭತ್ತದ ಸಸಿ ನಾಟಿಗೆ ಸಿದ್ಧಪಡಿಸಿಕೊಂಡಿರುವ ಭತ್ತದ ಸಸಿಮಡಿಗಳು ನೀರಿನಲ್ಲಿ ಕೊಳೆತು ಹೋಗಿವೆ. ಸಸಿನಾಟಿಗೆ ಸಸಿ ಕೊರತೆ ಉಂಟಾಗಿದೆ ಎಂದು ಹೊನ್ನೇತಾಳು ಗ್ರಾ.ಪಂ. ಸದಸ್ಯ ಕುಂದಾದ್ರಿ ರಾಘವೇಂದ್ರ ತಿಳಿಸಿದ್ದಾರೆ.

ಆಗಸ್ಟ್ 13ರ ನಂತರ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಲಿದ್ದು, ಮಳೆಯ ಪ್ರಮಾಣ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ.

 

 

 

 

Tags: 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !