ಗುರುವಾರ , ಆಗಸ್ಟ್ 18, 2022
25 °C

‘ಯುಪಿಎಸ್‌ಸಿ ಪರೀಕ್ಷೆ ಕನ್ನಡದಲ್ಲಿ ನಡೆಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆಯನ್ನು ಕನ್ನಡ ದಲ್ಲಿ ನಡೆಸುವ ಮೂಲಕ ಯುವಜನಾಂಗ ಉದ್ಯೋಗ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು’ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರು ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಅಗ್ನಿಪಥ ಯೋಜನೆಗೆ ದೇಶದಾದ್ಯಂತ ಯುವ ಸಮೂಹ ಆಕ್ರೋಶಗೊಂಡಿದ್ದು, ಉದ್ಯೋಗದ ಭರವಸೆಗಳನ್ನು ಈಡೇರಿಸಿಕೊಳ್ಳಲು ಕೇಂದ್ರ ಸರ್ಕಾರ ಸ್ಪಂದಿಸ
ಬೇಕಾಗಿದೆ. ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಯನ್ನು ಸ್ಥಳೀಯ ಭಾಷೆಯಲ್ಲಿ ಬರೆಯಲು ಅವಕಾಶ ನೀಡಬೇಕು. ಹಿಂದಿ ಹೇರಿಕೆ ಬಗ್ಗೆ ಕನ್ನಡಿಗರು ಎತ್ತಿರುವ ಪ್ರಶ್ನೆ ವಿಷಯದಲ್ಲಿ ಪ್ರಧಾನಿ ಮೋದಿ ಅವರು
ಮೌನ ವಹಿಸಿದ್ದರೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಿಂದಿ ಪರ ಮಾತನಾಡು
ತ್ತಿದ್ದಾರೆ. ಹೀಗಾಗಿ, ಗೊಂದಲ ದಲ್ಲಿರುವ ಕನ್ನಡಿಗರ ಪ್ರಶ್ನೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು