ಚನ್ನಪಟ್ಟಣ: ತಾಲ್ಲೂಕಿನ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಮಹಿಳಾ ಭಾಗವಹಿಸುವಿಕೆ ಕಡಿಮೆ ಇರುವ ನೀಲಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಣ್ಣಘಟ್ಟ ಗ್ರಾಮದಲ್ಲಿ ಗುರುವಾರ ಮಹಿಳಾ ಕಾಯಕೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ನರೇಗಾ ಯೋಜನೆ ಮಾಹಿತಿ ಜತೆಗೆ ವೈಯಕ್ತಿಕ ಕಾಮಗಾರಿ ಪರಿಚಯ ಹಾಗೂ ನರೇಗಾ ಅನುದಾನ ಮಾಹಿತಿ ನೀಡಲಾಯಿತು.
ತಾಲ್ಲೂಕು ಐಇಸಿ ಸಂಯೋಜಕಿ ಭವ್ಯ ಮಾತನಾಡಿ, ಮಹಿಳೆಯರಿಗೆ ಪುರುಷರಷ್ಟೇ ಸಮಾನ ವೇತನ, ಸಮಾನ ಕೂಲಿ ಇರುವ ಕೆಲಸ ನರೇಗಾ ಯೋಜನೆಯಲ್ಲಿ ಮಾತ್ರ ಕಾಣಬಹುದಾಗಿದೆ. ಗ್ರಾಮ ಪಂಚಾಯಿತಿಗಳಲ್ಲಿ ಬೇಡಿಕೆ ಅರ್ಜಿ ಸಲ್ಲಿಸಿ ನೇರವಾಗಿ ಕೆಲಸ ಪಡೆಯಬಹುದು ಎಂದು ತಿಳಿಸಿದರು.
ಸ್ಥಳದಲ್ಲೇ ದನದ ಕೊಟ್ಟಿಗೆ, ಕೈತೋಟ, ಮೇಕೆ ಶೆಡ್ಡು ಕಾಮಗಾರಿಗಳ ಬೇಡಿಕೆ ಪಡೆಯಲಾಯಿತು. ಯೋಜನೆಯ ಗ್ರಾಮ ಕಾಯಕ ಮಿತ್ರರು, ಕಾಯಕ ಬಂಧುಗಳು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.