ಚನ್ನಪಟ್ಟಣ: ಮನೆಯ ಹಿತ್ತಲಿನ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ 12 ಕುರಿಗಳನ್ನು ಕಳವು ಮಾಡಿರುವ ಘಟನೆ ತಾಲ್ಲೂಕಿನ ಯಲಚಿಪಾಳ್ಯದಲ್ಲಿ ಗುರುವಾರ ರಾತ್ರಿಯಲ್ಲಿ ನಡೆದಿದೆ.
ಗ್ರಾಮದ ರೈತ ಕರಿಯಪ್ಪ ಅವರ ಮಗ ವೆಂಕಟೇಶ ಅವರು ಸಾಕಿದ್ದ ಕುರಿಗಳು ಕಳವಾಗಿವೆ. ಮನೆಗೆ ಹೊಂದಿಕೊಂಡಂತೆ ಇರುವ ಕೊಟ್ಟಿಗೆಯಲ್ಲಿ ಕಟ್ಟಿಹಾಕಿ ಮನೆ ಮಂದಿ ನಿದ್ರಿಸುತ್ತಿದ್ದ ವೇಳೆ ಕುರಿಗಳನ್ನು ಕಳವು ಮಾಡಲಾಗಿದೆ.
ಸರಕು ಸಾಗಣೆ ವಾಹನದಲ್ಲಿ ಬಂದಿದ್ದ ಕಳ್ಳರು ಮನೆ ಬಳಿ ವಾಹನ ನಿಲ್ಲಿಸಿಕೊಂಡು 12 ಕುರಿಗಳನ್ನು ತುಂಬಿಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.