ಬುಧವಾರ, ಮೇ 27, 2020
27 °C

ದೆಹಲಿ ಮಸೀದಿ ಸಭೆಯಲ್ಲಿ ರಾಮನಗರ ಜಿಲ್ಲೆಯ 16 ಮಂದಿ ಭಾಗಿ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ದೆಹಲಿಯ ನಿಜಾಮುದ್ದೀನ್‌ ಪ್ರದೇಶದಲ್ಲಿ ನಡೆದ ಸಮಾವೇಶದಲ್ಲಿ ಜಿಲ್ಲೆಯ 16 ಮಂದಿ ಭಾಗಿಯಾಗಿರುವ ಸಾಧ್ಯತೆ ಕುರಿತು ಜಿಲ್ಲಾಧಿಕಾರಿಗೆ ಮಾಹಿತಿ ರವಾನೆ ಆಗಿದೆ.

‘ಆ ಹೊತ್ತಿನಲ್ಲಿ ನಿಜಾಮುದ್ದೀನ್‌ ಪ್ರದೇಶದಲ್ಲಿ ಕ್ರಿಯಾಶೀಲವಾಗಿದ್ದ ಮೊಬೈಲ್ ಸಂಖ್ಯೆಗಳ ವಿಳಾಸದ ಆಧಾರದ ಮೇಲೆ ಈ 16 ಜನರ ವಿಳಾಸವನ್ನು ನೀಡಿದ್ದಾರೆ. ಈ ವಿಳಾಸದಲ್ಲಿದ್ದವರ ಕುಟುಂಬದವರನ್ನು ಸಂಪರ್ಕಿಸಲಾಗಿದೆ. ದೆಹಲಿಗೆ ಹೋದವರು ಲಾಕ್‌ಡೌನ್‌ ಕಾರಣ ಯಾರೂ ಇನ್ನೂ ಜಿಲ್ಲೆಗೆ ವಾಪಸ್‌ ಆಗಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಆದರೆ ಈವರೆಲ್ಲ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆಯೋ ಇಲ್ಲವೋ ಎಂಬುದು ಖಚಿತವಾಗಿಲ್ಲ’ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು