ರಾಮನಗರ: ಕೋವಿಡ್-19 ಸೋಂಕಿಗೆ ತುತ್ತಾಗಿರುವ ಚನ್ನಪಟ್ಟಣದ ಶಾನುಭೋಗನಹಳ್ಳಿ ನಿವಾಸಿ ಜೊತೆ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕ ಹೊಂದಿದ 24 ಮಂದಿಯನ್ನು ಆರೋಗ್ಯ ಇಲಾಖೆ ಕ್ವಾರಂಟೈನ್ ಮಾಡಿದೆ. ಈ ವ್ಯಕ್ತಿಯ ಪ್ರವಾಸದ ಹಿನ್ನೆಲೆ ಹುಡುಕುವುದೇ ಅಧಿಕಾರಿಗಳಿಗೆ ತಲೆನೋವಾಗಿದೆ.

ರಾಮನಗರ ಜೈಲಿನ ಸಿಬ್ಬಂದಿಯಾಗಿರುವ ಈ ಯುವಕ ಪಾದರಾಯನಪುರ ಆರೋಪಿಗಳು ಜೈಲಿನಲ್ಲಿದ್ದ ವೇಳೆ ಕಾರ್ಯ ನಿರ್ವಹಿಸಿದ್ದ. ಈ ಹಿನ್ನೆಲೆಯಲ್ಲಿ ಆತನನ್ನು 28 ದಿನಗಳ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು. ಎರಡು ಬಾರಿ ಪರೀಕ್ಷೆಗೆ ಒಳಪಟ್ಟಿದ್ದು, ನೆಗೆಟಿವ್ ವರದಿ ಬಂದಿತ್ತು. ಆದರೆ ಮೂರನೇ ಬಾರಿ ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವ್ ಬಂದಿರುವುದು ಆತಂಕ ಮೂಡಿಸಿದೆ.

ಕೆಲ ದಿನಗಳ ಹಿಂದಷ್ಟೇ ಈ ಯುವಕ ತನ್ನ ಸ್ನೇಹಿತರೊಂದಿಗೆ ಸೇರಿ ಪಾರ್ಟಿ ಮಾಡಿದ್ದ ಎನ್ನಲಾಗಿದೆ. ಹೀಗಾಗಿ ಆ ಸ್ನೇಹಿತರನ್ನೂ ಆರೋಗ್ಯ ಇಲಾಖೆ ಕ್ವಾರಂಟೈನ್‌ಗೆ ಒಳಪಡಿಸಿದೆ. ಸದ್ಯ ಶ್ಯಾನುಬೋಗನಹಳ್ಳಿ ಗ್ರಾಮವನ್ನು ಜಿಲ್ಲಾಡಳಿತ ಸೀಲ್‌ಡೌನ್ ಮಾಡಿದ್ದು, ಜನರ ಓಡಾಟಕ್ಕೆ ನಿರ್ಬಂಧ ವಿಧಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.