ಸೋಮವಾರ, ಜೂನ್ 21, 2021
20 °C

67 ಪ್ರಕರಣ ದೃಢ: 245 ಮಂದಿ ಗುಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಜಿಲ್ಲೆಯಲ್ಲಿ ಬುಧವಾರ ಹೊಸತಾಗಿ 67 ಮಂದಿಯಲ್ಲಿ ಕೋವಿಡ್‌-19 ಸೋಂಕು ದೃಢವಾಗಿದೆ. ಅಲ್ಲದೆ ಒಂದೇ ದಿನ 245 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಹೊರ ಬಂದಿದ್ದಾರೆ.

ಚನ್ನಪಟ್ಟಣ 18, ಕನಕಪುರ 15, ಮಾಗಡಿ 5 ಮತ್ತು ರಾಮನಗರದಲ್ಲಿ 29 ಪ್ರಕರಣಗಳು ವರದಿಯಾಗಿವೆ. ಎಲ್ಲರನ್ನೂ ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1917ಕ್ಕೆ ಏರಿಕೆಯಾಗಿದೆ. ಈ ಪೈಕಿ ಚನ್ನಪಟ್ಟಣ 423, ಕನಕಪುರ 389, ಮಾಗಡಿ 322 ಮತ್ತು ರಾಮನಗರ 783 ಪ್ರಕರಣಗಳು ಸೇರಿವೆ.

ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 56, ಕನಕಪುರ ತಾಲ್ಲೂಕಿನಲ್ಲಿ 45, ಮಾಗಡಿ ತಾಲ್ಲೂಕಿನಲ್ಲಿ 23 ಹಾಗೂ ರಾಮನಗರ ತಾಲ್ಲೂಕಿನಲ್ಲಿ 121 ಜನ ಸೇರಿ ಒಟ್ಟಾರೆ 245 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 1209 ಜನರು ಗುಣಮುಖರಾಗಿದ್ದಾರೆ. ಇನ್ನೂ 688 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.