ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಾರೋಹಳ್ಳಿ: 250 ಕೆ.ಜಿ ಪ್ಲಾಸ್ಟಿಕ್ ಉತ್ಪನ್ನ ವಶ

Published 6 ಜುಲೈ 2024, 6:14 IST
Last Updated 6 ಜುಲೈ 2024, 6:14 IST
ಅಕ್ಷರ ಗಾತ್ರ

ಹಾರೋಹಳ್ಳಿ: ಪಟ್ಟಣದ ಬಿಡದಿ ರಸ್ತೆಯಲ್ಲಿರುವ ಮಳಿಗೆಗಳ ಮೇಲೆ ಶುಕ್ರವಾರ ಜಿಲ್ಲಾ ಪರಿಸರ ಇಲಾಖೆ ಮತ್ತು ಹಾರೋಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 250 ಕೆಜಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ.

ಜಿಲ್ಲಾ ಪರಿಸರ ಅಧಿಕಾರಿ ಮಂಜುನಾಥ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಟರಾಜು ನೇತೃತ್ವದ ತಂಡ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡು, ಸ್ಥಳದಲ್ಲೇ ನಾಶಪಡಿಸಿದ್ದಾರೆ.

ಮೊದಲ ಬಾರಿ ದಾಳಿ ನಡೆಸಿದ್ದರಿಂದ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿ ದಂಡ ವಿಧಿಸಿದ್ದಾರೆ. ಮುಂದೆ ಇದೇ ರೀತಿ ಕಂಡು ಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಅಧಿಕಾರಿಗಳು ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡು ನಾಶ ಪಡಿಸುತ್ತಿದ್ದಂತೆ ಕೆಲವರು ವಾಗ್ವಾದಕ್ಕಿಳಿದರು. ಮೊದಲು ಪ್ಲಾಸ್ಟಿಕ್ ತಯಾರಿಸುವ ಕಾರ್ಖಾನೆಗಳ ಮೇಲೆ ದಾಳಿ ನಡೆಸಿ, ನಂತರ ಇಲ್ಲಿಗೆ ಬನ್ನಿ ಎಂದರು.

ಉಪ ಪರಿಸರ ಅಧಿಕಾರಿ ಮೀನಾಕ್ಷಿ, ಪಟ್ಟಣ ಪಂಚಾಯಿತಿ ರಾಜಸ್ವ ನಿರೀಕ್ಷಕ ನಾಗರಾಜು, ಶಿವರಾಜು, ಮಂಜುನಾಥ್, ಉಮೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಇನ್ನೊಮ್ಮೆ ಪುನರಾವರ್ತನೆಯಾದರೆ ಪ್ರಕರಣ ದಾಖಲು
ಸರ್ಕಾರವು ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿದೆ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಇದೀಗ ಎಚ್ಚರಿಕೆ ನೀಡಿ ದಂಡ ಮಾತ್ರ ವಿಧಿಸಲಾಗುತ್ತಿದೆ. ಇನ್ನೊಮ್ಮೆ ಇದೇ ರೀತಿ ಕಂಡು ಬಂದರೆ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು. ಜಿಲ್ಲೆಯಲ್ಲಿ ಪ್ಲಾಸ್ಟಿಕ್ ತಯಾರಿಕಾ ಘಟಕಗಳು ಕಂಡು ಬಂದರೆ ನನಗೆ ಮಾಹಿತಿ ನೀಡಿ ಯಾವುದೇ ಮುಲಾಜಿಲ್ಲದೆ ಕ್ರಮ ಜರುಗಿಸುತ್ತೇನೆ. ಮಂಜುನಾಥ್ ಜಿಲ್ಲಾ ಪರಿಸರ ಅಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT