ರಾಮನಗರ: ಬೆಂಗಳೂರಿನ `ಸ್ಪರ್ಧಾ ವಿಜೇತ~ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರವು ರಾಮನಗರ ಜಿಲ್ಲೆಯ ಸ್ಪರ್ಧಾ ಪರೀಕ್ಷೆಗಳ ಆಕಾಂಕ್ಷಿ ಅಭ್ಯರ್ಥಿಗಳಿಗಾಗಿ ಇದೇ 28 ಮತ್ತು 29ರಂದು ನಗರದ ಅಂಬೇಡ್ಕರ್ ಭವನದಲ್ಲಿ ತರಬೇತಿ ಏರ್ಪಡಿಸಿದೆ.

ಜಿಲ್ಲೆಯ ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ, ಬಿಡದಿ ಸುತ್ತಮುತ್ತಲಿನ ಪ್ರದೇಶದ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳು ಈ ಸಂದರ್ಭವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೇಂದ್ರದ ಮುಖ್ಯಸ್ಥ ಡಾ. ಕೆ.ಎಂ.ಸುರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆ.ಎ.ಎಸ್ ಪೂರ್ವಭಾವಿ ಪರೀಕ್ಷೆ, ಪಿಡಿಒ ಪರೀಕ್ಷೆ, ಶಿಕ್ಷಕರ ನೇಮಕಾತಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ಕುರಿತು ಸ್ಪರ್ಧಾರ್ಥಿಗಳಿಗೆ ಇಲ್ಲಿ ತರಬೇತಿ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಆಸಕ್ತರು ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 98454 19561 ಹಾಗೂ 99647 03601 ಸಂಪರ್ಕಿಸಬಹುದು.

29ರಂದು ರಾಮನಗರಕ್ಕೆ ಜಯೇಂದ್ರ ಸರಸ್ವತಿ
ರಾಮನಗರ: ರಾಮನಗರ ತಾಲ್ಲೂಕು ಬ್ರಾಹ್ಮಣ ಸಭಾ ಟ್ರಸ್ಟ್, ವಿಪ್ರ ಯುವ ಸೇವಾ ಟ್ರಸ್ಟ್, ವಿಪ್ರ ಮಹಿಳಾ ಮಂಡಳಿ, ಶಂಕರ ಸೇವಾ ಟ್ರಸ್ಟ್ ಜಂಟಿಯಾಗಿ ಇದೇ 29ರಂದು ನಗರದ ಸೀತ ರಾಮ ಸೇವಾ ಭಜನಾ ಮಂದಿರದಲ್ಲಿ ಬೆಳಿಗ್ಗೆ 7.30 ಗಂಟೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕಂಚಿ ಕಾಮಕೋಠಿ ಪೀಠದ ಜಯೇಂದ್ರ ಸರಸ್ವತಿ ಸ್ವಾಮೀಜಿ ಆಗಮಿಸುವರು ಎಂದು ಬ್ರಾಹ್ಮಣ ಸಭಾ ಟ್ರಸ್ಟ್ನ ಅಧ್ಯಕ್ಷ ಆರ್.ಜಿ.ಚಂದ್ರಶೇಖರ್ ತಿಳಿಸಿದ್ದಾರೆ.

ಆ ದಿನ ಬೆಳಿಗ್ಗೆ ಸ್ವಾಮೀಜಿ ಅವರನ್ನು ಹಳೆ ಬಸ್ ನಿಲ್ದಾಣದ ವೃತ್ತದಿಂದ ರಾಮದೇವರ ದೇವಾಲಯಕ್ಕೆ ಪೂರ್ಣಕುಂಭ ಸ್ವಾಗತದೊಂದಿಗೆ ಕರೆ ತರಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.