ಸೋಮವಾರ, ಸೆಪ್ಟೆಂಬರ್ 20, 2021
27 °C

ಟೌನ್ ಸೊಸೈಟಿಗೆ ₹ 2.91 ಲಕ್ಷ ಲಾಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನಪಟ್ಟಣ: ‘ಪಟ್ಟಣದ ದಿ ಟೌನ್ ಕೋ ಆಪರೇಟಿವ್ ಸೊಸೈಟಿಯು 2020-21ನೇ ಸಾಲಿನಲ್ಲಿ ₹ 2.91 ಲಕ್ಷ ಲಾಭಗಳಿಸಿದೆ’ ಎಂದು ಸೊಸೈಟಿ ಅಧ್ಯಕ್ಷ ಎಲ್.ಎಸ್.ಆರ್. ಶ್ರೀಧರ್ ತಿಳಿಸಿದರು.

ಪಟ್ಟಣದ ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಸಭಾಂಗಣದಲ್ಲಿ ಗುರುವಾರ ನಡೆದ 2020-21ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರ ಸಹಕಾರದಿಂದ ಕೊರೊನಾ ನಡುವೆಯೂ ಪ್ರಗತಿಯತ್ತ ಸಾಗುತ್ತಿದೆ ಎಂದರು.

ಸಭೆಯಲ್ಲಿ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಂಘದ ಉಪಾಧ್ಯಕ್ಷ ರವಿಕುಮಾರ್, ನಿರ್ದೇಶಕರಾದ ಲಕ್ಷ್ಮಣ್ ಸಿಂಗ್, ಸಿ.ಎನ್. ಧರ್ಮಪ್ರಕಾಶ್, ವಿಷಕಂಠ, ಸಿ.ವಿ. ಶಂಕರರೆಡ್ಡಿ, ಆರ್. ರಂಗಸ್ವಾಮಿ, ಶ್ರೀಮತಿ, ಕಲಾವತಿ, ಅಪ್ಪಸ್ವಾಮಿ, ನಂದಕುಮಾರ್, ಸಿಬ್ಬಂದಿ ಗೋಪಾಲರಾವ್ ಹಾಜರಿದ್ದರು. ಸಂಘದ ಕಾರ್ಯದರ್ಶಿ ಟಿ.ಎಲ್. ಮಂಜು 2020-21ನೇ ಸಾಲಿನ ಆಡಿಟ್ ವರದಿ ಮಂಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.