ಶನಿವಾರ, ಜುಲೈ 31, 2021
25 °C

ರಾಮನಗರ: ನಾಲ್ಕು ಮಂದಿಗೆ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಜಿಲ್ಲೆಯಲ್ಲಿ ಭಾನುವಾರ ನಾಲ್ಕು ಮಂದಿಯಲ್ಲಿ ಕೋವಿಡ್‌-19 ಸೋಂಕು ಇರುವುದು ದೃಢವಾಗಿದೆ.

ಚನ್ನಪಟ್ಟಣ 1 ಮತ್ತು ರಾಮನಗರದಲ್ಲಿ 3 ಪ್ರಕರಣಗಳು ಪತ್ತೆಯಾಗಿದೆ. ಇವರನ್ನು ರಾಮನಗರದ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ. ಇದುವರೆಗೆ ಜಿಲ್ಲೆಯಲ್ಲಿ 389 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಕನಕಪುರ 85, ಮಾಗಡಿ 136, ಚನ್ನಪಟ್ಟಣ 71 ಮತ್ತು ರಾಮನಗರದ 97 ಪ್ರಕರಣಗಳು ಸೇರಿವೆ.

ಜಿಲ್ಲೆಯಲ್ಲಿ ದಾಖಲಾಗಿರುವ ಪ್ರಕರಣಗಳ ಪೈಕಿ 224 ಜನರು ಗುಣಮುಖರಾಗಿದ್ದರೆ, ಇನ್ನೂ 157 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಗುಣಮುಖರಾದವರಲ್ಲಿ ಕನಕಪುರದ 70, ಮಾಗಡಿ 68, ಚನ್ನಪಟ್ಟಣ 38 ಮತ್ತು ರಾಮನಗರದ 48 ಜನರು ಸೇರಿದ್ದಾರೆ. ಕನಕಪುರ 15, ಮಾಗಡಿ 61, ಚನ್ನಪಟ್ಟಣ 33 ಮತ್ತು ರಾಮನಗರದ 48 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು