ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಜಿಲ್ಲೆಗೆ ಬಂತು 5,000 ಡೋಸ್‌ ಕೋವಿಡ್‌ ಲಸಿಕೆ

Last Updated 15 ಜನವರಿ 2021, 8:03 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಗೆ ಶುಕ್ರವಾರ ಬೆಳಿಗ್ಗೆ ಬಂದ 5 ಸಾವಿರ ಕೋವಿಡ್ ಲಸಿಕೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಬರಮಾಡಿಕೊಂಡರು.

ಶನಿವಾರದಿಂದಲೇ ಲಸಿಕೆ ಕಾರ್ಯ ಆರಂಭ ಆಗಲಿದೆ.

ಜಿಲ್ಲೆಯಲ್ಲಿ ಈಗಾಗಲೇ ಸುಮಾರು 8 ಕಡೆ ಲಸಿಕಾ ಕೇಂದ್ರವನ್ನು ತೆರೆಯಲಾಗಿದ್ದು, 107 ಸೆಷನ್ ನಲ್ಲಿ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿ ಕೇಂದ್ರದಲ್ಲಿ ತಲಾ 100 ಮಂದಿಗೆ ಲಸಿಕೆ ನೀಡಲಾಗುತ್ತದೆ. ಜಿಲ್ಲಾಸ್ಪತ್ರೆ, ರಾಮಕೃಷ್ಣ ಆಸ್ಪತ್ರೆ, ದಯಾನಂದ ಸಾಗರ್ ಆಸ್ಪತ್ರೆ, ಚನ್ನಪಟ್ಟಣ ತಾಲ್ಲೂಕು ಆಸ್ಪತ್ರೆ, ಕನಕಪುರ ಮೆಟರ್ ನಿಟಿ ಆಸ್ಪತ್ರೆ, ಮಾಗಡಿ ತಾಲ್ಲೂಕು ಆಸ್ಪತ್ರೆ, ಇಗ್ಗಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕನಕಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಗುರುತಿಸಲಾಗಿದ್ದು, ಪ್ರತಿ ಕೇಂದ್ರಕ್ಕೆ 5 ವ್ಯಾಕ್ಸಿನೇಟರ್ ಗಳನ್ನು ನೇಮಕ ಮಾಡಲಾಗಿದೆ.

ರಾಮನಗರದಲ್ಲಿ ಇದುವರೆಗೆ 8405 ಮಂದಿಯನ್ನು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ ರಾಮನಗರ ತಾಲ್ಲೂಕಿನಲ್ಲಿ- 3161, ಚನ್ನಪಟ್ಟಣ- 1633, ಮಾಗಡಿ-1601, ಕನಕಪುರ -2010 ಸೇರಿದ್ದಾರೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್, ಆರ್.ಸಿ.ಎಚ್ ಅಧಿಕಾರಿ ಡಾ. ಪದ್ಮಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT