ಶನಿವಾರ, ಸೆಪ್ಟೆಂಬರ್ 26, 2020
23 °C

ಕೋವಿಡ್‌: 64 ಪ್ರಕರಣ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಜಿಲ್ಲೆಯಲ್ಲಿ ಸೋಮವಾರ ಹೊಸತಾಗಿ 64 ಮಂದಿಯಲ್ಲಿ ಕೋವಿಡ್‌–19 ಸೋಂಕು ದೃಢವಾಗಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 1273ಕ್ಕೆ ಏರಿದೆ.

ಚನ್ನಪಟ್ಟಣ 19, ಕನಕಪುರ 22, ಮಾಗಡಿ 2 ಮತ್ತು ರಾಮನಗರ 21 ಪ್ರಕರಣಗಳು ವರದಿಯಾಗಿವೆ. ಸೋಂಕಿತರನ್ನು ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಚನ್ನಪಟ್ಟಣ 292, ಕನಕಪುರ 242, ಮಾಗಡಿ 263 ಮತ್ತು ರಾಮನಗರ 476 ಪ್ರಕರಣಗಳು ಸೇರಿವೆ.

22 ಮಂದಿ ಗುಣಮುಖ: ಸೋಮವಾರ ಚನ್ನಪಟ್ಟಣ ತಾಲ್ಲೂಕಿನ 3, ಮಾಗಡಿ ತಾಲ್ಲೂಕಿನಲ್ಲಿ 11 ಹಾಗೂ ರಾಮನಗರ ತಾಲ್ಲೂಕಿನ 8 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 566 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 101, ಕನಕಪುರ 145, ಮಾಗಡಿ 149 ಮತ್ತು ರಾಮನಗರ 171 ಜನರು ಸೇರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು