ಶುಕ್ರವಾರ, ಸೆಪ್ಟೆಂಬರ್ 25, 2020
21 °C

ರಾಮನಗರಳ: 64 ಕೊರೊನಾ ಪ್ರಕರಣ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಜಿಲ್ಲೆಯಲ್ಲಿ ಬುಧವಾರ 64 ಮಂದಿಯಲ್ಲಿ ಕೋವಿಡ್‌-19 ಸೋಂಕು ದೃಢವಾಗಿದೆ.

ಚನ್ನಪಟ್ಟಣ 12, ಕನಕಪುರ 14, ಮಾಗಡಿ 2 ಮತ್ತು ರಾಮನಗರದಲ್ಲಿ 36 ಪ್ರಕರಣಗಳು ಹೊಸತಾಗಿ ವರದಿಯಾಗಿವೆ. ಸೋಂಕಿತರನ್ನು ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇದುವರೆಗೆ ಜಿಲ್ಲೆಯಲ್ಲಿ 1419 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 324, ಕನಕಪುರ 281, ಮಾಗಡಿ 267 ಮತ್ತು ರಾಮನಗರ 547 ಪ್ರಕರಣಗಳು ಸೇರಿವೆ.

ಗುಣಮುಖ: ಬುಧವಾರ 29 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಹೊರ ನಡೆದಿದ್ದಾರೆ. ಇದರಲ್ಲಿ ಚನ್ನಪಟ್ಟಣ ತಾಲ್ಲೂಕಿನ 8, ಮಾಗಡಿ ತಾಲ್ಲೂಕಿನ 9 ಹಾಗೂ ರಾಮನಗರದ 12 ಜನರು ಸೇರಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 601 ಜನರು ಗುಣಮುಖರಾಗಿದ್ದಾರೆ. ಇನ್ನೂ 801 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸೋಂಕಿನಿಂದಾಗಿ ಒಟ್ಟು 17 ಮಂದಿ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು