ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: 76 ಮಂದಿಗೆ ಸೋಂಕು ದೃಢ

Last Updated 2 ಸೆಪ್ಟೆಂಬರ್ 2020, 15:27 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಲ್ಲಿ ಬುಧವಾರ 76 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿದೆ.

ಚನ್ನಪಟ್ಟಣ 29, ಕನಕಪುರ 7, ಮಾಗಡಿ 4 ಮತ್ತು ರಾಮನಗರ 36 ಪ್ರಕರಣಗಳು ಇದರಲ್ಲಿ ಸೇರಿವೆ. ಇದರಿಂದಾಗಿ ಸೋಂಕಿತರ ಸಂಖ್ಯೆ ಒಟ್ಟು 3619ಕ್ಕೆ ಏರಿಕೆ ಆಗಿದೆ. ಈ ಪೈಕಿ ಚನ್ನಪಟ್ಟಣ 894, ಕನಕಪುರ 757, ಮಾಗಡಿ 511 ಮತ್ತು ರಾಮನಗರ 1457 ಪ್ರಕರಣಗಳು ಸೇರಿವೆ. ರಾಮನಗರ ತಾಲ್ಲೂಕಿನಲ್ಲಿ ಒಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ. ಸೋಂಕಿನಿಂದಾಗಿ ಒಟ್ಟು 44 ಮಂದಿ ನಿಧನರಾಗಿದ್ದಾರೆ.

ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 10, ಕನಕಪುರ ತಾಲ್ಲೂಕಿನಲ್ಲಿ 6, ಮಾಗಡಿ ತಾಲ್ಲೂಕಿನಲ್ಲಿ 3 ಹಾಗೂ ರಾಮನಗರ ತಾಲ್ಲೂಕಿನಲ್ಲಿ 34 ಜನ ಸೇರಿ ಒಟ್ಟಾರೆ 53 ಜನರು ಬುಧವಾರ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 2624 ಜನರು ಗುಣಮುಖರಾಗಿದ್ದಾರೆ. ಇನ್ನೂ 951 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT