ಮಂಗಳವಾರ, ಜೂನ್ 15, 2021
27 °C

ರಾಮನಗರ: 78 ಮಂದಿಯಲ್ಲಿ ಸೋಂಕು ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಜಿಲ್ಲೆಯಲ್ಲಿ ಶುಕ್ರವಾರ 78 ಮಂದಿಯಲ್ಲಿ ಕೋವಿಡ್‌ ಸೋಂಕು ಪತ್ತೆಯಾಗಿದೆ.

ಚನ್ನಪಟ್ಟಣ ತಾಲ್ಲೂಕು ಒಂದರಲ್ಲಿಯೇ 47 ಮಂದಿಯಲ್ಲಿ ಸೋಂಕು ದೃಢವಾಗಿದೆ. ಕನಕಪುರ 12, ಮಾಗಡಿ 3 ಮತ್ತು ರಾಮನಗರ 16 ಪ್ರಕರಣಗಳು ಸೇರಿವೆ. ಜಿಲ್ಲೆಯಲ್ಲಿ ಸೋಂಕಿತರಾದವರ ಸಂಖ್ಯೆ 2626ಕ್ಕೆ ಏರಿಕೆ ಆಗಿದೆ. ಈ ಪೈಕಿ ಚನ್ನಪಟ್ಟಣ 639, ಕನಕಪುರ 539, ಮಾಗಡಿ 402 ಮತ್ತು ರಾಮನಗರ 1046 ಪ್ರಕರಣಗಳು ಸೇರಿವೆ.

ಒಬ್ಬರು ಸಾವು: ರಾಮನಗರ ತಾಲ್ಲೂಕಿನಲ್ಲಿ 58 ವರ್ಷದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೇ ಶುಕ್ರವಾರ ಮೃತಪಟ್ಟಿದ್ದಾರೆ. ಇದರಿಂದಾಗಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆ ಆಗಿದೆ.

ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 8, ಕನಕಪುರ ತಾಲ್ಲೂಕಿನಲ್ಲಿ 12 ಹಾಗೂ ರಾಮನಗರ ತಾಲ್ಲೂಕಿನಲ್ಲಿ 8 ಜನ ಸೇರಿ ಒಟ್ಟಾರೆ 28 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 1718 ಜನರು ಗುಣಮುಖರಾಗಿದ್ದಾರೆ. ಇನ್ನೂ 878 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾದರಿ ಸಂಗ್ರಹ: ಶುಕ್ರವಾರ ಹೊಸದಾಗಿ 431 ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು 24827 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಒಟ್ಟು 21491 ಪರೀಕ್ಷಾ ವರದಿಯ ಫಲಿತಾಂಶ ನಕಾರಾತ್ಮಕವಾಗಿರುತ್ತದೆ. ಒಟ್ಟು 681 ಪ್ರಕರಣಗಳ ವರದಿ ಬರಬೇಕಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು