ಕನಕಪುರ: ಮಳಗಾಳು ಗ್ರಾಮದಲ್ಲಿ ದಲಿತ ಯುವಕನ ಕೈ ಕತ್ತರಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ರಾಹುಲ್ (25) ಎಂದು ಗುರುತಿಸಲಾಗಿದೆ. ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಘಟನೆಯ ನಂತರ ತಲೆವರಿಸಿಕೊಂಡಿದ್ದ ಈತ ಮಂಡ್ಯದಲ್ಲಿ ಆಶ್ರಯ ಪಡೆದಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
15 ದಿನಗಳ ಹಿಂದೆ ಮಳಗಾಳು ಗ್ರಾಮದಲ್ಲಿ ರೌಡಿಗಳು ಮಾರಕಸ್ತ್ರಗಳಿಂದ ಮನೆಗೆ ನುಗ್ಗಿ ಅನೀಶ್ ಎಂಬ ಯುವಕನ ಕೈ ಕತ್ತರಿಸಿ, ನಂತರ ತಲೆಮರೆಸಿಕೊಂಡಿದ್ದರು. ತನಿಖೆ ಚುರುಕುಗೊಳಿಸಿದ್ದ ಪೊಲೀಸರು ಆಗಲೇ ಆರು ಆರೋಪಿಗಳನ್ನು ಬಂಧಿಸಿದ್ದಾರೆ.