ಶನಿವಾರ, ಆಗಸ್ಟ್ 13, 2022
24 °C

81 ಕೆ.ಜಿ. ಗಾಂಜಾ ವಶ: ಆರೋಪಿಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಜಿಲ್ಲೆಯ ಪೊಲೀಸರು ಬುಧವಾರ ಎರಡು ಪ್ರತ್ಯೇಕ ಪ್ರಕರಣದಲ್ಲಿ ಒಟ್ಟು 81 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.

ತಾವರೆಕೆರೆ ಪೊಲೀಸ್‌ ಠಾಣೆ ವ್ಯಾಪ್ತಿಯ ತಗಚಕುಪ್ಪೆ-ಪೂಜಾರಹಟ್ಟಿ ಕಾಲೊನಿಯ ರಸ್ತೆ ನಡುವೆ ಗಾಂಜಾ ಸೊಪ್ಪು ಮಾರುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದು, 60 ಕೆ.ಜಿ.ಯಷ್ಟು ಸೊಪ್ಪನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಬೆಂಗಳೂರಿನ ನಿವಾಸಿಗಳಾದ ಕುಪ್ಪುಸ್ವಾಮಿ (45), ಪಾಂಗಿಪ್ರಸಾದ್ (28), ಶಿವರಾಜ (29), ಶಂಕರ (47), ಮಂಜುನಾಥ (24), ನವೀನ್‌ಕುಮಾರ್‍ (24). ಶರತ್‌ಕುಮಾರ್‍ (21) ಹಾಗೂ ಕಾರ್ತಿಕ್‌ ಎಂಬುವರನ್ನು ಬಂಧಿಸಲಾಗಿದೆ. ಬಂಧಿತರಿಂದ ಒಂದು ಇನೋವಾ ಕಾರ್‍, ಒಂದು ಬೈಕ್, ಮೂರು ಮೊಬೈಲ್‌ ಹಾಗೂ 3 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ರಾಮನಗರ ಟೌನ್‌ ಠಾಣೆ ಪೊಲೀಸರು 21 ಕೆ.ಜಿ.ಯಷ್ಟು ಗಾಂಜಾ ವಶಕ್ಕೆ ಪಡೆದಿದ್ದಾರೆ. ರಾಮನಗರ ಜಿಲ್ಲಾ ಕ್ರೀಡಾಂಗಣದ ಪಕ್ಕ ಹಾಜಿನಗರಕ್ಕೆ ಹೋಗುವ ರಸ್ತೆಯಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದು, ಆತನಿಂದ 2 ಚೀಲಗಳಲ್ಲಿ ತುಂಬಿದ್ದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು