ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: 82 ಕೊರೊನಾ ಪ್ರಕರಣ ದೃಢ: ಒಬ್ಬರು ಸಾವು

Last Updated 8 ಅಕ್ಟೋಬರ್ 2020, 16:04 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಲ್ಲಿ ಗುರುವಾರ 82 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿದೆ.

ಚನ್ನಪಟ್ಟಣ 39, ಕನಕಪುರ 13, ಮಾಗಡಿ 8 ಮತ್ತು ರಾಮನಗರ 22 ಪ್ರಕರಣಗಳು ಇದರಲ್ಲಿ ಸೇರಿವೆ. ಇದುವರೆಗೆ ಜಿಲ್ಲೆಯಲ್ಲಿ 6187 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 1488, ಕನಕಪುರ 1341, ಮಾಗಡಿ 971 ಮತ್ತು ರಾಮನಗರ 2387 ಪ್ರಕರಣಗಳು ಸೇರಿವೆ. ಕನಕಪುರ ತಾಲ್ಲೂಕಿನಲ್ಲಿ ಒಬ್ಬರು ಮೃತಪಟ್ಟಿದ್ದು, ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ 59ಕ್ಕೆ ಏರಿದೆ.

ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 32, ಕನಕಪುರ ತಾಲ್ಲೂಕಿನಲ್ಲಿ 52, ಮಾಗಡಿ ತಾಲ್ಲೂಕಿನಲ್ಲಿ 26 ಹಾಗೂ ರಾಮನಗರ ತಾಲ್ಲೂಕಿನಲ್ಲಿ 31 ಸೇರಿ ಒಟ್ಟಾರೆ 141 ಜನರು ಗುರುವಾರ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 5403 ಜನರು ಗುಣಮುಖರಾಗಿದ್ದಾರೆ. ಇನ್ನೂ 725 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT