ಗುರುವಾರ , ಏಪ್ರಿಲ್ 22, 2021
29 °C

ರಾಮನಗರ: 84 ಮಂದಿಗೆ ಸೋಂಕು ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಜಿಲ್ಲೆಯಲ್ಲಿ ಶುಕ್ರವಾರ 84 ಮಂದಿಯಲ್ಲಿ ಕೋವಿಡ್ ಸೊಂಕು ದೃಢವಾಗಿದೆ.

ಚನ್ನಪಟ್ಟಣ 16, ಕನಕಪುರ 20, ಮಾಗಡಿ 16 ಮತ್ತು ರಾಮನಗರ 32 ಪ್ರಕರಣಗಳು ಇದರಲ್ಲಿ ಸೇರಿವೆ. ಇದುವರೆಗೆ ಜಿಲ್ಲೆಯಲ್ಲಿ 4347 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 1026, ಕನಕಪುರ 896, ಮಾಗಡಿ 658 ಮತ್ತು ರಾಮನಗರ 1767 ಪ್ರಕರಣಗಳು ವರದಿಯಾಗಿವೆ. 52 ಮಂದಿ ನಿಧನರಾಗಿದ್ದಾರೆ.

ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 14, ಕನಕಪುರ ತಾಲ್ಲೂಕಿನಲ್ಲಿ 17, ಮಾಗಡಿ ತಾಲ್ಲೂಕಿನಲ್ಲಿ 13 ಹಾಗೂ ರಾಮನಗರ ತಾಲ್ಲೂಕಿನಲ್ಲಿ 32 ಜನ ಸೇರಿ ಒಟ್ಟಾರೆ 76 ಜನರು ಶುಕ್ರವಾರ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 3459 ಜನರು ಗುಣಮುಖರಾಗಿದ್ದಾರೆ. ಇನ್ನೂ 836 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.