ಶುಕ್ರವಾರ, ಆಗಸ್ಟ್ 19, 2022
22 °C

ರಾಮನಗರ: 94 ಪ್ರಕರಣ ದೃಢ: ಒಂದು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಜಿಲ್ಲೆಯಲ್ಲಿ ಬುಧವಾರ 94 ಮಂದಿಯಲ್ಲಿ ಕೋವಿಡ್‌ ಸೋಂಕು ದೃಢವಾಗಿದೆ. ಚಿಕಿತ್ಸೆ ಫಲಿಸದೇ ಒಬ್ಬರು ಸಾವನ್ನಪ್ಪಿದ್ದಾರೆ.

ಚನ್ನಪಟ್ಟಣ 19, ಕನಕಪುರ 18, ಮಾಗಡಿ 12 ಮತ್ತು ರಾಮನಗರ 45 ಪ್ರಕರಣಗಳು ಇದರಲ್ಲಿ ಸೇರಿವೆ. ಇದರಿಂದಾಗಿ ಸೋಂಕಿತರ ಒಟ್ಟು ಸಂಖ್ಯೆಯು 4128ಕ್ಕೆ ಏರಿದೆ. ಚನ್ನಪಟ್ಟಣ 985, ಕನಕಪುರ 844, ಮಾಗಡಿ 622 ಮತ್ತು ರಾಮನಗರ 1677 ಪ್ರಕರಣಗಳು ಇದರಲ್ಲಿ ಸೇರಿವೆ. ಮಾಗಡಿ ತಾಲ್ಲೂಕಿನಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ 52 ಮಂದಿ ನಿಧನರಾಗಿದ್ದಾರೆ.

ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 20, ಕನಕಪುರ ತಾಲ್ಲೂಕಿನಲ್ಲಿ 16, ಮಾಗಡಿ ತಾಲ್ಲೂಕಿನಲ್ಲಿ 12 ಹಾಗೂ ರಾಮನಗರ ತಾಲ್ಲೂಕಿನಲ್ಲಿ 33 ಜನ ಸೇರಿ ಒಟ್ಟಾರೆ 81 ಜನರು ಬುಧವಾರ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 3121 ಜನರು ಗುಣಮುಖರಾಗಿದ್ದಾರೆ. ಇನ್ನೂ 955 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.