96 ಮಂದಿಯಲ್ಲಿ ಸೋಂಕು: ಒಂದು ಸಾವು

ರಾಮನಗರ: ಜಿಲ್ಲೆಯಲ್ಲಿ ಮಂಗಳವಾರ 96 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿದೆ.
ಚನ್ನಪಟ್ಟಣ 35, ಕನಕಪುರ 11, ಮಾಗಡಿ 20 ಮತ್ತು ರಾಮನಗರ 30 ಪ್ರಕರಣಗಳು ಇದರಲ್ಲಿ ಸೇರಿವೆ. ಇದರಿಂದಾಗಿ ಸೋಂಕಿತರ ಸಂಖ್ಯೆ 3543ಕ್ಕೆ ಏರಿಕೆ ಆಗಿದೆ. ಈ ಪೈಕಿ ಚನ್ನಪಟ್ಟಣ 865, ಕನಕಪುರ 750, ಮಾಗಡಿ 507 ಮತ್ತು ರಾಮನಗರ 1421 ಪ್ರಕರಣಗಳು ಸೇರಿವೆ. ಕನಕಪುರ ತಾಲ್ಲೂಕಿನಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿನಿಂದಾಗಿ ಈವರೆಗೆ ಜಿಲ್ಲೆಯಲ್ಲಿ 43 ಮಂದಿ ನಿಧನರಾಗಿದ್ದಾರೆ.
ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 10, ಕನಕಪುರ ತಾಲ್ಲೂಕಿನಲ್ಲಿ 13, ಮಾಗಡಿ ತಾಲ್ಲೂಕಿನಲ್ಲಿ 3 ಹಾಗೂ ರಾಮನಗರ ತಾಲ್ಲೂಕಿನಲ್ಲಿ 32 ಜನ ಸೇರಿ ಒಟ್ಟಾರೆ 58 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 2571 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 631, ಕನಕಪುರ 527, ಮಾಗಡಿ 354 ಮತ್ತು ರಾಮನಗರದ 1059 ಜನರು ಸೇರಿದ್ದಾರೆ. ಇನ್ನೂ 929 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.