ಶುಕ್ರವಾರ, ಜೂಲೈ 10, 2020
22 °C

ರಾಮನಗರ | ಮಹಿಳೆ ಮೇಲೆ ಕರಡಿ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಚನ್ನಪಟ್ಟಣ ನಗರದ ಸುಣ್ಣದ ಕೇರಿಯಲ್ಲಿ ಬುಧವಾರ ನಸುಕಿನಲ್ಲಿ ಕರಡಿಯೊಂದು ಮಹಿಳೆ ಮೇಲೆ ದಾಳಿ ನಡೆಸಿದೆ.

ನಗರಸಭೆಯ ಮಾಜಿ ಸದಸ್ಯೆ ಸಾಕಮ್ಮ (65) ಅವರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ರಕ್ಷಣೆಗೆ ಧಾವಿಸಿದ ಪುತ್ರ ಸುಧೀರ್ (40) ಸಹ ಗಾಯಗೊಂಡಿದ್ದಾರೆ.

ಬೆಳಗ್ಗೆ ಮನೆಯಿಂದ ಹೊರಗೆ ಬಂದ ಸಂದರ್ಭ ಕಾಂಪೌಂಡ್‌ನ ಒಳಗೇ ಕರಡಿ ದಾಳಿ ನಡೆಸಿತು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು