ಬಿಡದಿ: ಶುಕ್ರವಾರ ಸುರಿದ ಭಾರಿ ಮಳೆಯಿಂದಾಗಿ ಹೋಬಳಿಯ ಬನ್ನಿಕುಪ್ಪೆ ಗ್ರಾಮದ ಬದ್ರಯ್ಯ ಕಾಲೊನಿಯ ಸಂಪರ್ಕ ರಸ್ತೆ ಸೇತುವೆ ಕೊಚ್ಚಿ ಹೋಗಿದೆ.

ಬದ್ರಯ್ಯ ಕಾಲೊನಿ ಬಳಿ ಹರಿಯುವ ನಲ್ಲಿಗುಡ್ಡ ಕೆರೆಯ ದೊಡ್ಡಹಳ್ಳಕ್ಕೆ ಇತ್ತೀಚೆಗೆ ಲೋಕೋಪಯೋಗಿ ಇಲಾಖೆಯಿಂದ ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು.ಕಳಪೆ ಕಾಮಗಾರಿ ಪರಿಣಾಮ ಸೇತುವೆ ಕೊಚ್ಚಿ ಹೋಗಿದೆ ಎಂದು ನಾಗರಿಕರು ದೂರಿದ್ದಾರೆ. ಈ ಭಾಗದಲ್ಲಿ ಲೇಔಟ್ ನಿರ್ಮಾಣಕ್ಕಾಗಿ ಖಾಸಗಿ ವ್ಯಕ್ತಿಯೊಬ್ಬರು ಜಮೀನು ಖರೀದಿಸಿದ್ದಾರೆ. ಕೆಳಗೆ ಹರಿಯುತ್ತಿದ್ದ ಹಳ್ಳಕ್ಕೆ ದೊಡ್ಡ ಕಾಂಪೌಂಡ್ ನಿರ್ಮಾಣ ಮಾಡಿ ಹಳ್ಳದ ಸ್ವರೂಪವನ್ನು ಬದಲಾವಣೆ ಮಾಡಿರುವುದೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ.

ಕಂದಾಯ ಇಲಾಖೆಯ ಅನುಮತಿ ಇಲ್ಲದೆ ನಿರ್ಮಾಣ ಮಾಡಿರುವ ಈ ಕಾಂಪೌಂಡ್ ಅನ್ನು ತೆರವುಗೊಳಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.