ಮಂಗಳವಾರ, ಜನವರಿ 31, 2023
18 °C

ಗಮನ ಸೆಳೆದ ಆಹಾರ ಮೇಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಇಲ್ಲಿನ ಹೋಲಿ ಕ್ರೆಸೆಂಟ್ ಇಂಗ್ಲಿಷ್‌ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಆಹಾರ ಮೇಳ ಗಮನ ಸೆಳೆಯಿತು.

ಅಂಗಡಿಗಳ ಮಾದರಿಯಲ್ಲಿ ಮಳಿಗೆಗಳನ್ನು ನಿರ್ಮಿಸಲಾಗಿತ್ತು. ಅವುಗಳಲ್ಲಿ ವಿದ್ಯಾರ್ಥಿಗಳೇ ಉತ್ಸಾಹದಿಂದ ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸಿ ಅವುಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೂ ಇಟ್ಟಿದ್ದರು. ಅತಿಥಿಗಳು, ಪೋಷಕರು ಹಾಗೂ ಸಹಪಾಠಿಗಳು ಅದರ ರುಚಿ ಸವಿದರು.

ಎರಡು ದಿನಗಳ ಈ ‘ಕ್ರೆಸೆಂಟ್ ಫುಡ್ ಅಂಡ್ ಬ್ಯುಸಿನೆಸ್ ಬಜಾರ್’ ಹಬ್ಬಕ್ಕೆ ನಗರಸಭೆ ಅಧ್ಯಕ್ಷೆ ಬಿ.ಕೆ. ಪವಿತ್ರಾ ಚಾಲನೆ ನೀಡಿದರು. ವಿಜ್ಞಾನಮೇಳ, ಆಹಾರ ಹಬ್ಬದಂತಹ ಕಾರ್ಯಕ್ರಮಗಳು ಶಾಲಾ ಮಕ್ಕಳ ಜ್ಞಾನ ವೃದ್ದಿ ಮಾಡುವ ಜೊತೆಗೆ ಹೊರ ಪ್ರಪಂಚದ ವ್ಯವಹಾರಿಕ ಪರಿಜ್ಞಾನವನ್ನು ಕಟ್ಟಿಕೊಡುತ್ತವೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲೆಯ ಕಾರ್ಯದರ್ಶಿ ಅಲ್ತಾಫ್‌ ಅಹಮ್ಮದ್‌ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಜೊತೆಗೆ ವ್ಯವಹಾರಿಕ ಜ್ಞಾನವನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಲಿಕೆಯ ಹಂತದಲ್ಲಿ ಮಕ್ಕಳ ಅಭಿರುಚಿಯನ್ನು ಅರ್ಥ ಮಾಡಿಕೊಂಡು ಅವರನ್ನು ಪ್ರೋತ್ಸಾಹಿಸುವ ಕೆಲಸವನ್ನು ಪೋಷಕರು ಮತ್ತು ಶಿಕ್ಷಕರು ಮಾಡಬೇಕಾಗಿದೆ ಎಂದರು.

ಕಿರುತೆರೆ ನಟಿ ಸುಷ್ಮಿತಾ ಮಾತನಾಡಿ, ಶಾಲೆಯಲ್ಲಿ ಆಯೋಜಿಸಿರುವ ಆಹಾರ ಮೇಳ ನಿಮ್ಮಲ್ಲಿ ಹೊಸ ಬದಲಾವಣೆ ತರುವ ಜ್ಞಾನವನ್ನು ನೀಡುವಲ್ಲಿ ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಆಹಾರ ಪದ್ದತಿಯನ್ನು ಅನುಸರಿಸಿ ಆರೋಗ್ಯ ಕಾಪಾಡಿಕೊಳ್ಳುವತ್ತ ಹೆಚ್ಚು ಒತ್ತು ಕೊಡಿ ಎಂದು ಕಿವಿಮಾತು ಹೇಳಿದರು.

ಶಿಕ್ಷಣ ಸಂಸ್ಥೆ ಅಧ್ಯಕ್ಷೆ ಶಾಜಿಯಾ, ಪ್ರಾಂಶುಪಾಲ ಎಸ್.ಶಿವಮೂರ್ತಿ, ಮುಖ್ಯ ಶಿಕ್ಷಕಿ ಪಿ. ಲತಾ, ಆಡಳಿತಾಧಿಕಾರಿ ಸ್ಟ್ಯಾನ್ಲಿಪಾಲ್ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.