ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನವ ಸಂಬಂಧ ಬೆಸೆಯುವ ನಾಟಕ: ಕೆ.ಆರ್. ಪಾಂಡುರಂಗ

Last Updated 24 ಏಪ್ರಿಲ್ 2022, 7:12 IST
ಅಕ್ಷರ ಗಾತ್ರ

ರಾಮನಗರ: ನಾನು ಎಂಬ ಅಹಂ ಬಿಟ್ಟಾಗಷ್ಟೇ ಮನುಷ್ಯ ಸಮಾಜದಲ್ಲಿ ಸಂಘಟಿತವಾಗಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಜೆಡಿಎಸ್‌ ಮುಖಂಡ ಕೆ.ಆರ್. ಪಾಂಡುರಂಗ ತಿಳಿಸಿದರು.

ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿ ಜಗಜ್ಯೋತಿ ಬಸವೇಶ್ವರ ಕೃಪಾ ಪೋಷಿತ ನಾಟಕ ಮಂಡಳಿಯಿಂದ ಆಯೋಜಿಸಿದ್ದ ಶನಿಪ್ರಭಾವ ನಾಟಕ ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿ ಅಭಿನಯಿಸುವ ನಾಟಕಗಳು ನಮ್ಮ ಭಾರತೀಯ ಸಂಸ್ಕೃತಿಯ ಕಣಜಗಳಾಗಿವೆ. ಮನುಷ್ಯನಿಗೆ ಮಾನವೀಯ ಮೌಲ್ಯಗಳನ್ನು ತಿಳಿಸುತ್ತವೆ ಎಂದರು.

ಅಲೆಮಾರಿ, ಅರೆ ಅಲೆಮಾರಿ ನಿಗಮ ಅಧ್ಯಕ್ಷ ರವೀಂದ್ರ ಶೆಟ್ಟಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಅಭಿನಯಿಸುವ ನಾಟಕಗಳು ಗ್ರಾಮೀಣ ಜನರ ಒಗ್ಗೂಡಿಕೆ ಸಮಾಜಮುಖಿ ಜೀವನಕ್ಕೆ ಮುಂದಡಿ ಇಟ್ಟಿವೆ ಎಂದರು.

ತಾ.ಪಂ. ಮಾಜಿ ಅಧ್ಯಕ್ಷ ಭದ್ರಯ್ಯ, ತಮಿಳುನಾಡು ಗೇರುಮಾಳ ವಿರಕ್ತಮಠದ ಶಿವಪಂಚಾಕ್ಷರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿದರು. ಗ್ರಾ.ಪಂ. ಅಧ್ಯಕ್ಷೆ ಮಂಗಳಗೌರಮ್ಮ ಗಿರಿಯಪ್ಪ, ಉಪಾಧ್ಯಕ್ಷ ಮಲ್ಲೇಶ್, ಸದಸ್ಯರಾದ ಮಹದೇವಮ್ಮ, ಜ್ಯೋತಿ ಬಾಲಕೃಷ್ಣ, ಸುನಿತಾ ನಾಗರಾಜ್‍ ಸಿಂಗ್, ಯಡೂರಯ್ಯ, ರಂಗಸ್ವಾಮಿ, ಪುಟ್ಟಸ್ವಾಮಿ, ಮಹದೇಶಸ್ವಾಮಿ, ಲೀಲಾವತಿ ಶಿವರಾಜು, ಶ್ರೀನಿವಾಸ್, ಗ್ರಾ.ಪಂ. ಮಾಜಿ ಅಧ್ಯಕ್ಷ ಆರ್. ಶಿವಾನಂದ, ಮುಖಂಡರಾದ ಶ್ರೀನಿವಾಸ್, ಕೃಷ್ಣಪ್ಪ, ವಿಭೂತಿಕೆರೆ ಶಿವಲಿಂಗಯ್ಯ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT