ಸೋಮವಾರ, ಮೇ 10, 2021
19 °C

ಕಾಡಾನೆ ದಾಳಿಯಿಂದ ರೈತನನ್ನು ರಕ್ಷಿಸಿದ ಬೀದಿನಾಯಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಪುರ: ಕಾಡಾನೆಯೊಂದು ರೈತರೊಬ್ಬರ ಮೇಲೆ ದಾಳಿ ನಡೆಸಿ ಸೊಂಡಿಲಿನಿಂದ ಬಡಿದು ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಕೋಡಿಹಳ್ಳಿ ಹೋಬಳಿ ಬಿಳಿದಾಳೆ ಗ್ರಾಮದಲ್ಲಿ ಬುಧವಾರ ನಡೆದಿದೆ.

ಗಾಯಗೊಂಡವರನ್ನು ಬಿಳಿದಾಳೆ ಗ್ರಾಮದ ರೈತ ಕೊಂಡಯ್ಯ (58) ಎಂದು ಗುರುತಿಸಲಾಗಿದೆ. ಅವರು ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ಜಮೀನಿನ ಕಡೆ ಹೋದಾಗ ಆನೆಯು ಓಡಿಸಿಕೊಂಡು ಬಂದು ಸೊಂಡಲಿನಿಂದ ದಾಳಿ ನಡೆಸಿದೆ.

ಸೊಂಡಿಲು ಸ್ವಲ್ಪ ತಾಕಿ ಕೆಳಕ್ಕೆ ಬಿದ್ದಿದ್ದಾರೆ. ಗ್ರಾಮದಲ್ಲಿದ್ದ ಬೀದಿ ನಾಯಿಗಳು ಜೋರಾಗಿ ಬೊಗಳಿದ್ದರಿಂದ ಆನೆ ಓಡಿ ಹೋಗಿದೆ. ನಾಯಿಗಳೇ ಕೊಂಡಯ್ಯನನ್ನು ಕಾಪಾಡಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಅವರಿಗೆ ಕನಕಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್‌ಗೆ ಕಳುಹಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು