ಮಾಗಡಿ: ತಾಲ್ಲೂಕಿನ ಹೊಸಪಾಳ್ಯ ಜನತಾ ಕಾಲೊನಿ ತಿರುವು ಬಳಿ ರಸ್ತೆ ಉಬ್ಬು ನಿರ್ಮಿಸುವ ಮೂಲಕ ವಾಹನ ಸವಾರರಿಗೆ ಎಚ್ಚರಿಸುವ ಕೆಲಸ ಮಾಡಲಾಗಿದೆ.

ಹೊಸ ವರ್ಷ ದಿನದಂದು ಮಡಿಕೆ ಟೀ ಕುಡಿಯಲು ಹೋಗಿದ್ದ ಯುವಕರ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಆರಕ್ಕೂ ಹೆಚ್ಚು ಮಂದಿಗೆ ಗಾಯವಾಗಿತ್ತು. ಬೋರಿ ಹೊನ್ನಯ್ಯನಪಾಳ್ಯದ ಗ್ರಾ.ಪಂ ಮಾಜಿ ಸದಸ್ಯ ಧನಂಜಯ್ಯ, ಕೆ-ಶಿಪ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಕೂಡಲೇ ರಸ್ತೆ ತಿರುವು ಕಾಮಗಾರಿ ಪೂರ್ಣವಾಗದ ಹಿನ್ನೆಲೆಯಲ್ಲಿ ವೇಗ ನಿಯಂತ್ರಣಕ್ಕೆ ರಸ್ತೆ ಉಬ್ಬು ಅಳವಡಿಸಬೇಕು ಎಂದು ಮನವಿ ಮಾಡಿದ್ದರು.

ತಹಶೀಲ್ದಾರ್ ಶರತ್ ಕುಮಾರ್ ಹಾಗೂ ಆರ್ಐ ಮಧು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.