ಶನಿವಾರ, ಸೆಪ್ಟೆಂಬರ್ 18, 2021
31 °C

ವೃಷಭಾವತಿ ನದಿಯಲ್ಲಿ ಕೊಚ್ಚಿಹೋದ ಯುವಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಿಡದಿ: ಚೌಕಹಳ್ಳಿ ಗ್ರಾಮದ ಬಳಿ ಭಾನುವಾರ ಬೆಳಿಗ್ಗೆ ವೃಷಭಾವತಿ ನದಿಗೆ ಯುವಕನೊಬ್ಬ ಆಯತಪ್ಪಿ ಬಿದ್ದು ಕೊಚ್ಚಿ ಹೋಗಿದ್ದಾನೆ. 

ಚೌಕಹಳ್ಳಿ ನಿವಾಸಿ ಕೌಶಿಕ್ ರೆಡ್ಡಿ (26) ನಾಪತ್ತೆಯಾಗಿದ್ದು, ಆತನಿಗಾಗಿ ಹುಡುಕಾಟ ನಡೆದಿದೆ. ಆತ ಬೆಳಿಗ್ಗೆ ವಾಕಿಂಗ್ ಮುಗಿಸಿಕೊಂಡು ಬಂದು ಸೇತುವೆ ಮೇಲೆ ಕುಳಿತುಕೊಳ್ಳುವಾಗ ಆಯತಪ್ಪಿ ವೃಷಭಾವತಿ ನದಿ ಬಿದ್ದಿದ್ದಾನೆ ಎನ್ನಲಾಗಿದೆ. 

ಬೆಂಗಳೂರಿನ ಕೆಲವೆಡೆ ಶನಿವಾರ ರಾತ್ರಿ ಉತ್ತಮ ಮಳೆಯಾದ ಕಾರಣ ವೃಷಭಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಯುವಕನ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.