ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕಪುರ: ಪ್ರವಾಸಕ್ಕೆ ಬಂದಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು

Published 13 ಏಪ್ರಿಲ್ 2024, 6:48 IST
Last Updated 13 ಏಪ್ರಿಲ್ 2024, 6:48 IST
ಅಕ್ಷರ ಗಾತ್ರ

ಕನಕಪುರ: ಕುಟುಂಬದ ಜೊತೆ ಪ್ರವಾಸಕ್ಕೆ ಬಂದಿದ್ದ ಯುವಕ ಗುರುವಾರ ತಾಲ್ಲೂಕಿನ ಸಂಗಮದ ಕಾವೇರಿ ನದಿಯಲ್ಲಿ ಕಾಲುಜಾರಿ ಮುಳುಗಿ ಮೃತಪಟ್ಟಿದ್ದಾನೆ.

ಬೆಂಗಳೂರಿನ ಹೆಣ್ಣೂರು ಮುಖ್ಯ ರಸ್ತೆಯ ಬೈರತಿಯ ಗೋಪಾಲ್ ಅವರ ಪುತ್ರ ಸಾಯಿತೇಜ(19) ಮೃತ ಯುವಕ.

ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಸಾಯಿತೇಜ ಗುರುವಾರ ಕಂಪನಿಗೆ ರಜೆ ಇದ್ದುದರಿಂದ ತಮ್ಮ ಕುಟುಂಬದ ಹತ್ತು ಮಂದಿ ಸದಸ್ಯರೊಂದಿಗೆ ತಾಲ್ಲೂಕಿನ ಸಂಗಮಕ್ಕೆ ಬಂದಿದ್ದರು. ಕುಟುಂಬದ ಸದಸ್ಯರೊಂದಿಗೆ ನೀರಿನಲ್ಲಿ ಇಳಿದು ಆಟವಾಡುವ ವೆಳೆ ಕಾಲು ಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಚಾರವನ್ನು ಕುಟುಂಬದ ಸದಸ್ಯರು ಸಾತನೂರು ಪೊಲೀಸ್ ಠಾಣೆಗೆ ತಿಳಿಸಿದ್ದಾರೆ. ಮಾಹಿತಿ ಮೇರೆಗೆ ಸಾತನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಹುಡುಕಾಟ ನಡೆಸಿ ಸಂಜೆ ವೇಳೆಗೆ ಮೃತ ದೇಹವನ್ನು ಹೊರಕ್ಕೆ ತೆಗೆದು ಮೃತ ದೇಹವನ್ನು ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.

ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹವನ್ನು ಶುಕ್ರವಾರ ಮಧ್ಯಾಹ್ನ ಕುಟುಂಬದವರಿಗೆ ಹಸ್ತಾಂತರಿಸಳಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT