ಉಪ ನೋಂದಣಾಧಿಕಾರಿ ಕಚೇರಿಗಳ ಮೇಲೆ ದಾಳಿ

ರಾಮನಗರ: ಜಿಲ್ಲೆಯ ರಾಮನಗರ ಹಾಗೂ ಮಾಗಡಿ ಉಪ ನೋಂದಣಾಧಿಕಾರಿ ಕಚೇರಿ ಹಾಗೂ ಸುತ್ತಲಿನ ಪತ್ರ ಬರಹಗಾರರ ಕಚೇರಿಗಳ ಮೇಲೆ ಶುಕ್ರವಾರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದರು.
ರಾಮನಗರದಲ್ಲಿ ಮೂವತ್ತು ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪ್ರತಿ ಕಚೇರಿಯಲ್ಲೂ ಶೋಧ ನಡೆಸಿತ್ತು. ರಾತ್ರಿಯಾದರೂ ಈ ಕಾರ್ಯಾಚರಣೆ ನಿಂತಿರಲಿಲ್ಲ. ಮಾಗಡಿ ಕಚೇರಿಯಲ್ಲೂ ಅಧಿಕಾರಿಗಳಿಂದ ತಪಾಸಣೆ ಮುಂದುವರಿದಿತ್ತು. ದಾಳಿ ಸಂದರ್ಭ ಕಚೇರಿಗಳನ್ನು ಒಳಗಿನಿಂದ ಮುಚ್ಚಲಾಗಿತ್ತು. ಮಾಗಡಿಯಲ್ಲಿ ಡಿವೈಎಸ್ಪಿ ಮಲ್ಲೇಶ್ ನೇತೃತ್ವದಲ್ಲಿ ದಾಳಿ ನಡೆಯಿತು. ಈ ಸಂದರ್ಭ ಒಂದಿಷ್ಟು ಪ್ರಮಾಣದಲ್ಲಿ ಹಣ ಸಹ ಪತ್ತೆಯಾಯಿತು ಎನ್ನಲಾಗಿದೆ.
ನೋಂದಣಿ ಅಧಿಕಾರಿಗಳ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಕುರಿತು ಸಾರ್ವಜನಿಕರು ಎಸಿಬಿಗೆ ದೂರು ನೀಡಿದ್ದರು. ಇದನ್ನು ಆಧರಿಸಿ ಎಸಿಬಿ ತಂಡ ದಾಳಿ ನಡೆಸಿದೆ. ಎಷ್ಟು ಪ್ರಮಾಣದಲ್ಲಿ ದಾಖಲೆಗಳನ್ನು ವಶಕ್ಕೆ ಪಡೆದಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.