ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್‌ ಚಕ್ರಕ್ಕೆ ಸಿಲುಕಿ ಮಹಿಳೆ ಸಾವು

Published 1 ಜೂನ್ 2024, 4:53 IST
Last Updated 1 ಜೂನ್ 2024, 4:53 IST
ಅಕ್ಷರ ಗಾತ್ರ

ರಾಮನಗರ: ನಗರದ ಬಸ್ ನಿಲ್ದಾಣದಲ್ಲಿ ಶುಕ್ರವಾರ ಸಂಜೆ 4.30ರ ಸುಮಾರಿಗೆ ಮಹಿಳೆಯೊಬ್ಬರು ಬಸ್‌ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮರಿಸಿದ್ದೇಗೌಡನದೊಡ್ಡಿಯ ಗೌರಮ್ಮ (48) ಮೃತರು.

ನಿಲ್ದಾಣದ ಪ್ಲಾಟ್‌ಫಾರಂನಲ್ಲಿ ಬಸ್‌ಗಳು ನಿಲ್ಲುವ ಸ್ಥಳದಲ್ಲಿ ಗೌರಮ್ಮ ಅವರು ಬಸ್‌ಗಾಗಿ ಕಾಯುತ್ತಾ ನಿಂತಿದ್ದರು. ಈ ವೇಳೆ, ಪ್ಲಾಟ್‌ಫಾರಂಗೆ ಬಸ್ಸೊಂದು ರಿವರ್ಸ್ ತೆಗೆದುಕೊಳ್ಳುವಾಗ ಗೌರಮ್ಮ ಅವರಿಗೆ ಗುದ್ದಿದೆ. ಆಯತಪ್ಪಿ ಬಿದ್ದ ಅವರು ಚಕ್ರದಡಿ ಸಿಲುಕಿದ್ದಾರೆ. ಕೂಡಲೇ ಚಾಲಕನ ಗಮನಕ್ಕೆ ತಂದು ಮಹಿಳೆಯನ್ನು ಹೊರಗೆಳೆದ ಜಿಲ್ಲಾಸ್ಪತ್ರೆಗೆ ಕರೆ ತರಲಾಯಿತು ಎಂದು ರಾಮನಗರ ಸಂಚಾರ ಠಾಣೆ ಪೊಲೀಸರು ತಿಳಿಸಿದರು.

ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಬಸ್ ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT