ಸೋಮವಾರ, ಜನವರಿ 20, 2020
22 °C

ಅಪಘಾತ: ಬೈಕ್‌ ಸವಾರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಕನಕಪುರ: ಬೈಕ್‌ನಲ್ಲಿ ರಾಮನಗರಕ್ಕೆ ಹೋಗುತ್ತಿದ್ದ ಯುವಕ ವಿದ್ಯುತ್‌ ಕಂಬಕ್ಕೆ ಡಿಕ್ಕಿಹೊಡೆದು ಸಾವನ್ನಪ್ಪಿರುವುದು ನಗರದ ಮೆಳೆಕೋಟೆಯಲ್ಲಿ ಮಂಗಳವಾರ ಮಧ್ಯರಾತ್ರಿ ನಡೆದಿದೆ.

ಮೆಳೆಕೋಟೆ ಗ್ರಾಮದ ಸುಹೇಲ್‌ (19) ಮೃತ ವ್ಯಕ್ತಿ. ಅವರು ದ್ವಿಚಕ್ರ ವಾಹನದಲ್ಲಿ ಕನಕಪುರದಿಂದ ರಾಮನಗರಕ್ಕೆ ಹೋಗುತ್ತಿದ್ದಾಗ ವಿದ್ಯುತ್‌ ಕಂಬಕ್ಕೆ ವಾಹನ ಗುದ್ದಿದೆ.

ತಕ್ಷಣವೇ ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಷ್ಟರಲ್ಲೇ ಅವರು ಮೃತಪಟ್ಟಿದ್ದಾಗಿ ಪರೀಕ್ಷಿಸಿದ ವೈದ್ಯರು ಖಚಿತ ಪಡಿಸಿದರೆಂದು ಪೊಲೀಸರು ತಿಳಿಸಿದ್ದಾರೆ. ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು