ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುದೂರು | ಸರಣಿ ಅಪಘಾತ: ವ್ಯಕ್ತಿ ಸಾವು

Published 17 ಜೂನ್ 2024, 6:06 IST
Last Updated 17 ಜೂನ್ 2024, 6:06 IST
ಅಕ್ಷರ ಗಾತ್ರ

ಕುದೂರು: ರಾಷ್ಟ್ರೀಯ ಹೆದ್ದಾರಿ 75ರ ಹೋಬಳಿಯ ಮರೂರು ಹ್ಯಾಂಡ್ ಪೋಸ್ಟ್ ಬಳಿ ಶುಕ್ರವಾರ ರಾತ್ರಿ ರಸ್ತೆ ಉಬ್ಬು (ಹಂಪ್ಸ್‌) ದಾಟುತ್ತಿದ್ದ ಕಾರಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದು ಸಂಭವಿಸಿದ ಸರಣಿ ಅಪಘಾತದಲ್ಲಿ ಕಾರಿನಲ್ಲಿದ್ದ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. 

ಅಪಘಾತದಲ್ಲಿ ಕಾರಿನಲ್ಲಿದ್ದ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಗೋವಿನಕೆರೆ ಗ್ರಾಮದ ಬಸವರಾಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಹಾಗೂ ಗೂಡ್ಸ್ ಆಟೊದಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅಪಘಾತದಲ್ಲಿ ಒಟ್ಟು ನಾಲ್ಕು ವಾಹನ ಜಖಂಗೊಂಡಿವೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೊರಟಿದ್ದ ಕೆಎಸ್ಆರ್‌ಟಿಸಿ ಬಸ್ ರಸ್ತೆಉಬ್ಬು ಬಳಿ ನಿಧಾನವಾಗಿ ಹೊರಟಿದ್ದ ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಹಿಂದಕ್ಕೆ ತಿರುಗಿದೆ. ಆಗ ಬಸ್ ಉಜ್ಜಿಕೊಂಡು ಹೋಗಿ ಮುಂದಿದ್ದ ಮತ್ತೊಂದು ಕಾರು ಹಾಗೂ ಗೂಡ್ಸ್ ಆಟೊಗೆ ಡಿಕ್ಕಿ ಹೊಡೆದಿದೆ. 

ಅವೈಜ್ಞಾನಿಕವಾಗಿ ನಿರ್ಮಿಸಿರುವ ರಸ್ತೆಉಬ್ಬಿನಿಂದಾಗಿ ಹೆದ್ದಾರಿಯಲ್ಲಿ ಪದೇ ಪದೇ ಅಪಘಾತವಾಗುತ್ತಿವೆ. ಹೆದ್ದಾರಿ ಪ್ರಾಧಿಕಾರ ತುರ್ತಾಗಿ ಮರೂರು ಹ್ಯಾಂಡ್ ಪೋಸ್ಟ್ ಬಳಿ ಹೈ ಮಾಸ್ಟ್ ದೀಪ ಹಾಗೂ ಬ್ಲಿಂಕಿಂಗ್ ಲೈಟ್‌ ಅಳವಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT