ಶುಕ್ರವಾರ, ಡಿಸೆಂಬರ್ 4, 2020
22 °C

ಮಾಗಡಿ: ಸ್ಕೂಟರ್‌ ಸವಾರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಗಡಿ: ಗುಡೇಮಾರನಹಳ್ಳಿ ರಸ್ತೆಯ ದೊಡ್ಡರಂಗಯ್ಯನ ಪಾಳ್ಯ ಗೇಟ್‌ ಬಳಿ ಗೂಡ್ಸ್‌ ವ್ಯಾನ್‌ ಡಿಕ್ಕಿ ಹೊಡೆದು ಸ್ಕೂಟರ್‌ ಸವಾರ ಮತ್ತು ಹಸು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.

ಚಕ್ರಬಾವಿ ಗ್ರಾಮದ ಗಂಗಾಧರ್‌(45) ಮೃತಪಟ್ಟವರು. ಮಾಗಡಿಯಿಂದ ಗುಡೇಮಾರನಹಳ್ಳಿ ಕಡೆಗೆ ಅತಿವೇಗವಾಗಿ ಚಲಿಸುತ್ತಿದ್ದ ಗೂಡ್ಸ್‌ ವ್ಯಾನ್‌ ರಸ್ತೆ ದಾಟುತ್ತಿದ್ದ ಹಸುವಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಚಾಲಕ ಪರಾರಿಯಾಗಿದ್ದಾನೆ.

ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದ್ದ ಗಂಗಾಧರ್‌ ಅವರನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.  ಮೃತ ಹಸು ರೈತ ನಾಗರಾಜು ಎಂಬುವರಿಗೆ ಸೇರಿದೆ.  ಮಾಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.