ಶುಕ್ರವಾರ, ಜೂಲೈ 10, 2020
26 °C

ರಾಮನಗರ | ಲಾರಿ ಡಿಕ್ಕಿ: ಯುವಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ತಾಲ್ಲೂಕಿನ ಮಾಯಗಾನಹಳ್ಳಿ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಂಗಳವಾರ ಟಿಪ್ಪರ್‌ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿದ್ದಾನೆ.

ಬೆಂಗಳೂರು ನಿವಾಸಿ ಅನಂತ್‌ ಕಾಮತ್ (24) ಮೃತ ಯುವಕ. ರಾಮನಗರದ ಖಾಸಗಿ ಬ್ಯಾಂಕ್‌ನ ಉದ್ಯೋಗಿಯಾಗಿದ್ದ ಈತ ನಿತ್ಯ ಬೆಂಗಳೂರಿನಿಂದ ರಾಮನಗರಕ್ಕೆ ಕೆಲಸಕ್ಕೆಂದು ಬರುತ್ತಿದ್ದ. ಅಂತೆಯೇ ಬೆಳಗ್ಗೆ ಕೆಲಸಕ್ಕೆ ಬರುತ್ತಿದ್ದ ವೇಳೆ ಟಿಪ್ಪರ್ ಲಾರಿ ಈತನ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿಯಾಯಿತು. ಇದರಿಂದಾಗಿ ಆತ ಹೆದ್ದಾರಿಗೆ ಬಿದ್ದು ತಲೆಗೆ ತೀವ್ರ ಪೆಟ್ಟಾಗಿ ಮೃತಪಟ್ಟ ಎಂದು ಪೊಲೀಸರು ತಿಳಿಸಿದರು. ರಾಮನಗರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು