ಸೋಮವಾರ, ಜೂಲೈ 6, 2020
26 °C

ಅಭಿವೃದ್ಧಿ ವಿಚಾರದಲ್ಲಿ ಆಡಳಿತ ನಿಷ್ಕ್ರೀಯ

ಪ್ರಜಾವಾಣಿ ವಾರ್ತೆ ಎಂ.ಮುನಿನಾರಾಯಣ Updated:

ಅಕ್ಷರ ಗಾತ್ರ : | |

Prajavani

ಚನ್ನಪಟ್ಟಣ: ಶಾಸಕ ಎಚ್.ಡಿ.ಕುಮಾರಸ್ವಾಮಿ ಅವರು ತಾಲ್ಲೂಕಿನ ಸಮಗ್ರ ಅಭಿವೃದ್ಧಿ ವಿಚಾರದಲ್ಲಿ ಗಮನಹರಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಗಂಗಾಧರ್ ಒತ್ತಾಯಿಸಿದರು.

ಪಟ್ಟಣದ ತಾಲ್ಲೂಕು ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಕೊರೊನಾ ನೆಪವಾಗಿಟ್ಟುಕೊಂಡು ಸ್ಥಳೀಯ ಆಡಳಿತಗಳು ಅಭಿವೃದ್ಧಿ ಮರೆತಿವೆ. ಗ್ರಾಮೀಣ ಹಾಗೂ ನಗರ ಭಾಗದಲ್ಲಿ ಜನರು ಮೂಲ ಸೌಲಭ್ಯಗಳಿಂದ ವಂಚಿತರಾಗಿ ಸಮಸ್ಯೆ ಎದುರಿಸುವಂತಾಗಿದೆ. ಇದನ್ನು ಶಾಸಕರು ಗಮನಿಸಬೇಕು ಎಂದರು.

ಗ್ರಾಮೀಣ ಭಾಗದಲ್ಲಿ ರಸ್ತೆ, ಚರಂಡಿ ಸೇರಿದಂತೆ ಹಲವು ಸಮಸ್ಯೆಗಳಿವೆ. ರಸ್ತೆಗಳು ಹದಗೆಟ್ಟು ಸಂಚರಿಸಲು ಸಾಧ್ಯವಾಗದ ಸ್ಥಿತಿ ಇದೆ. ಚರಂಡಿಗಳು ಕಟ್ಟಿಕೊಂಡು ನೀರು ಸರಾಗವಾಗಿ ಹರಿದುಹೋಗದೆ ಸಮಸ್ಯೆಯಾಗಿದೆ. ಇದನ್ನೆಲ್ಲ ಸರಿಪಡಿಸಬೇಕಾದ ಸ್ಥಳೀಯ ಆಡಳಿತ ನಿಷ್ಕ್ರಿಯವಾಗಿವೆ. ಈ ಬಗ್ಗೆ ಶಾಸಕರೂ ಸಹ ಗಮನಹರಿಸುತ್ತಿಲ್ಲ ಎಂದು ಆರೋಪಿಸಿದರು.

ಪಟ್ಟಣ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಕಸ ಬಿದ್ದು ಗಬ್ಬು ನಾರುತ್ತಿದೆ. ನಗರಸಭೆ ಸದಸ್ಯರು ಇಲ್ಲದ ಕಾರಣ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದರು

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ.ಸಿ.ವೀರೇಗೌಡ, ಶಿವಮಾದು, ಮುಖಂಡರಾದ ಶರತ್ ಚಂದ್ರ, ಎಸ್.ಸಿ.ಶೇಖರ್, ಮತ್ತೀಕೆರೆ ಹನುಮಂತಯ್ಯ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು