ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವೀನ ತಾಂತ್ರಿಕತೆ ಅಳವಡಿಸಿಕೊಳ್ಳಿ

ಪ್ರಗತಿಪರ ಹಾಲು ಉತ್ಪಾದಕ ರೈತರಿಗೆ ಸನ್ಮಾನ
Last Updated 4 ಸೆಪ್ಟೆಂಬರ್ 2022, 4:56 IST
ಅಕ್ಷರ ಗಾತ್ರ

ರಾಮನಗರ: ‘ಉತ್ತಮ ತಳಿಯ ರಾಸುಗಳನ್ನು ಸಾಕುವುದರ ಜೊತೆಗೆ ಹೈನುಗಾರಿಕೆಯಲ್ಲಿ ಆಧುನಿಕ ತಾಂತ್ರಿಕತೆ ಅಳವಡಿಸಿಕೊಂಡರೆ ಹೆಚ್ಚಿನ ಲಾಭ ಪಡೆಯಬಹುದು’ ಎಂದು ಬಮುಲ್ ನಿರ್ದೇಶಕ ಪಿ. ನಾಗರಾಜು ತಿಳಿಸಿದರು.

ತಾಲ್ಲೂಕಿನ ಕವಣಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಶನಿವಾರ ನಿವೃತ್ತ ಮುಖ್ಯ ಕಾರ್ಯ ನಿರ್ವಾಹಕ ಮತ್ತು ಪ್ರಗತಿಪರ ಹಾಲು ಉತ್ಪಾದಕ ರೈತರನ್ನು ಸನ್ಮಾನಿಸಿ ಮಾತನಾಡಿದರು.

ಪ್ರಸ್ತುತ ಪಶು ಆಹಾರ ಮತ್ತಿತರ ವಸ್ತುಗಳ ಬೆಲೆ ಏರಿಕೆಯಿಂದ ಹೈನುಗಾರ ರೈತರಿಗೆ ಆರ್ಥಿಕ ಹೊಡೆತ ಬೀಳುತ್ತಿದ್ದು ಹೈನುಗಾರಿಕೆಯಲ್ಲಿ ಲಾಭಾಂಶ ಕಾಣಲು ಸಾಧ್ಯವಾಗುತ್ತಿಲ್ಲ ಎಂದು ರೈತರು ಹೇಳುತ್ತಿದ್ದಾರೆ. ಹಾಲಿನ ದರ ಹೆಚ್ಚಿಸುವಂತೆ ಒಕ್ಕೂಟ, ಕೆಎಂಎಫ್ ಅಧ್ಯಕ್ಷರು, ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಒಕ್ಕೂಟದಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದ್ದು ದರ ಹೆಚ್ಚಿಸುವ ವಿಶ್ವಾಸವಿದೆ ಎಂದು ತಿಳಿಸಿದರು.

ಸಂಘದ ಅಧ್ಯಕ್ಷ ಕೆ. ಶಿವಲಿಂಗಯ್ಯ ಮಾತನಾಡಿ, ಸಂಘ ಪ್ರತಿದಿನ ರೈತರಿಂದ 2 ಸಾವಿರ ಲೀಟರ್ ಹಾಲು ಖರೀದಿಸುತ್ತಿದೆ. ಪ್ರಸ್ತುತ ಸಾಲಿನಲ್ಲಿ ₹ 8 ಲಕ್ಷ ನಿವ್ವಳ ಆದಾಯಗಳಿಸಿದೆ ಎಂದು ತಿಳಿಸಿದರು.

ಸಂಘದಿಂದ ನಿವೃತ್ತ ಮುಖ್ಯ ಕಾರ್ಯ ನಿರ್ವಾಹಕ ನಾಗೇಶ್ ಅವರಿಗೆ ಚಿನ್ನದ ಉಂಗುರ ತೊಡಿಸಿ ಸನ್ಮಾನಿಸಲಾಯಿತು. ಸಂಘಕ್ಕೆ ಹೆಚ್ಚು ಹಾಲು ಸರಬರಾಜು ಮಾಡಿದ ಧನರಾಜ್, ನಂದೀಶ್, ಬಿ. ನಾಗೇಶ್, ಎಂ. ರವಿ, ಎಂ. ಪ್ರಕಾಶ್ ಅವರನ್ನು
ಅಭಿನಂದಿಸಲಾಯಿತು.

ಬಮೂಲ್ ವಿಸ್ತರಣಾಧಿಕಾರಿ ವೆಂಕಟೇಶ್, ಗ್ರಾ.ಪಂ. ಸದಸ್ಯ ಕೆ. ಧನರಾಜ್, ಮುಖ್ಯ ಕಾರ್ಯ ನಿರ್ವಾಹಕ ದೇಶಿಲಿಂಗಯ್ಯ, ಉಪಾಧ್ಯಕ್ಷೆ ಮಂಗಳಮ್ಮ, ನಿರ್ದೇಶಕರಾದ ಕೆ.ಎಸ್. ಗುರುಲಿಂಗಯ್ಯ, ದೇವರಾಜು ಸ್ವಾಮಿ, ಲಿಂಗರಾಜು, ಬೆಟ್ಟಯ್ಯ, ವೆಂಕಟಸ್ವಾಮಿ, ನಿಂಗಮ್ಮ, ಹಾಲು ಪರೀಕ್ಷಕ ರಮೇಶ್, ಸಹಾಯಕ ಶ್ರೀನಿವಾಸ್ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT