ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕನಕಪುರ: ಸಾಂಕ್ರಾಮಿಕ ರೋಗ ತಡೆಗೆ ಮನವಿ

Published 5 ಜುಲೈ 2024, 4:35 IST
Last Updated 5 ಜುಲೈ 2024, 4:35 IST
ಅಕ್ಷರ ಗಾತ್ರ

ಕನಕಪುರ: ಡೆಂಗಿ, ಮಲೇರಿಯಾ, ಕಾಲರಾದಂತಹ ಸಾಂಕ್ರಾಮಿಕ ರೋಗಗಳು ಗ್ರಾಮಗಳಲ್ಲಿ ಹರಡುತ್ತಿದ್ದು, ರೋಗ ತಡೆಗಟ್ಟಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯರು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕಬ್ಬಾಳು ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಪಂಚಾಯಿತಿ ಅಧ್ಯೆಜ್ಷೆ ಗೀತಾ ಚಿಕ್ಕಣ್ಣ ಮಾತನಾಡಿ, ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಗ್ರಮಗಳಲ್ಲಿ ಬೀಚಿಂಗ್ ಪೌಡರ್ ಸಿಂಪಡಿಸಿ ಚರಂಡಿಗಳ ಹೂಳು ತೆಗೆದು ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಬೇಕೆಂದು ತಿಳಿಸಿದರು.

ಸಾಕಷ್ಟು ಜನ ಕಂದಾಯ ಪಾವತಿ ಮಾಡದೆ ವಿಳಂಬ ಮಾಡುತ್ತಿದ್ದಾರೆ. ಹಾಗಾಗಿ ಬೇಗ ಕಂದಾಯ ಪಾವತಿ ಮಾಡಬೇಕು ಎಂದರು.

ಜಲ ಜೀವನ್ ಮಿಷನ್ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ಕಾಮಗಾರಿ ವಿಳಂಬವಾಗುತ್ತಿದೆ. ಕೆಲವು ಗ್ರಾಮಗಳಲ್ಲಿ ಇನ್ನೂ ನಲ್ಲಿ ಸಂಪರ್ಕವನ್ನೇ ಕೊಟ್ಟಿಲ್ಲ. ಶೀಘ್ರ ಕಾಮಗಾರಿ ಪೂರ್ಣಗೊಳಿಸಲು ಸಂಬಂಧಪಟ್ಟವರಿಗೆ ಸೂಚನೆ ನೀಡಬೇಕು ಎಂದು ತಿಳಿಸಿದರು.

ಪಿಡಿಒ ಲೋಕೇಶ್ ಮಾತನಾಡಿ, ನೀರು ಗಂಟಿಗಳು ಪ್ರತಿ ಗ್ರಾಮದಲ್ಲಿ ಬೀಚಿಂಗ್ ಪೌಡರ್ ಸಿಂಪಡಿಸಿ ಸ್ವಚ್ಛತೆ ಕಾಪಾಡಿ, ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರಿಕೆ ವಹಿಸಿ ಎಂದು ಪಂಚಾಯಿತಿ ಸಿಬ್ಬಂದಿಗೆ ಸೂಚನೆ ನೀಡಿದರು.

ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬರದಂತೆ ನೋಡಿಕೊಳ್ಳಿ. ಗ್ರಾಮ ಪಂಚಾಯಿತಿಗಳಲ್ಲಿ ಜನನ ಮರಣ ಪ್ರಮಾಣ ಪತ್ರ ಸಿಗಲಿದ್ದು, ಸದಸ್ಯರು ತಮ್ಮ ಗ್ರಾಮಗಳಲ್ಲಿ ಜನರಿಗೆ ಮಾಹಿತಿ ನೀಡಿ ವ್ಯಕ್ತಿ ಮೃತ ಪಟ್ಟ 21 ದಿನಗಳ ಒಳಗಾಗಿ ಮರಣ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.

ಸಂತೋಷ್, ದಿಲೀಪ್, ಶಿವಣ್ಣ, ಕಾರ್ತಿಕ್, ಜಯಶೀಲಾ, ಸವಿತಾ, ಸಿದ್ದಮ್ಮ, ಭಾಗ್ಯಮ್ಮ, ರೂಪಾ, ಲಕ್ಷ್ಮಮ್ಮ, ಶಿವರಾಮು, ದ್ಯಾವೇಗೌಡ, ಗೋಪಾಲ್, ಸುಮಿತ್ರಾ, ಶಿಲ್ಪಾ, ಶ್ವೇತಾ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT