ಭಾನುವಾರ, ಸೆಪ್ಟೆಂಬರ್ 26, 2021
25 °C

ಅಪೌಷ್ಟಿಕತೆ ತಡೆಗಟ್ಟಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಗಡಿ: ‘ಆರೋಗ್ಯವಂತರಾಗಿರಲು ಮೊದಲಿನಿಂದಲೂ ಉತ್ತಮ ಆರೋಗ್ಯಕರ ಆಹಾರ ಪದ್ಧತಿ ಮತ್ತು ಜೀವನಶೈಲಿ ರೂಢಿಸಿಕೊಳ್ಳಬೇಕು’ ಎಂದು ಕೆವಿಕೆ ಗೃಹ ವಿಜ್ಞಾನಿ ಲತಾ ಆರ್‌. ಕುಲಕರ್ಣಿ ತಿಳಿಸಿದರು.

ಚಂದೂರಾಯನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಶುಕ್ರವಾರ ಮಹಿಳೆ ಮತ್ತು ಮಕ್ಕಳ ಅಪೌಷ್ಟಿಕತೆ ತಡೆಗಟ್ಟಲು ಆನ್‌ಲೈನ್‌ನಲ್ಲಿ ನಡೆದ ತರಬೇತಿಯಲ್ಲಿ ಅವರು ಮಾತನಾಡಿದರು.

ಕುಟುಂಬದ ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ ಹಾಗೂ ಸಮತೋಲನ ಆಹಾರ ಸೇವಿಸಬೇಕು ಎಂದು ಸಲಹೆ ನೀಡಿದರು.

ಸಂಪನ್ಮೂಲ ವ್ಯಕ್ತಿ ಗೀತಾ ಎಂ. ಯಂಕಂಚಿ ಮಾತನಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.